ಕುವೆಂಪು ಶತಮಾನೋತ್ತರ ನೋಟ ಎಂಬ ಪುಸ್ತಕವು ಡಾ. ಸಬಿಹಾ ಭೂಮಿ ಗೌಡ ಅವರ ಸಂಪಾದಿತ ಬರವಣಿಗೆಗಳ ಸಂಕಲನವಾಗಿದೆ. ಈ ಪುಸ್ತಕದಲ್ಲಿ ಕುವೆಂಪು ಸಾಹಿತ್ಯ ಕುರಿತಾದ ವಿಷಯಗಳನ್ನು ವಿವರಿಸಲಾಗಿದೆ .
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಸಬಿಹಾ ಭೂಮಿಗೌಡ ಮೂಲತಃ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗಜೇಂದ್ರಗಡದವರು. ತಂದೆ ಎಂ.ಆರ್. ಗಜೇಂದ್ರಗಡ, ತಾಯಿ ಸಾಹಿರಾ. ಎಂ.ಎ., ಪಿಎಚ್.ಡಿ. ಪಡೆದು ಪ್ರಾಧ್ಯಾಪಕಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರು, ಕರಾವಳಿ ಲೇಖಕಿಯರು ಮತ್ತು ವಾಚಕಿಯರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಗೆ (ವಿಮರ್ಶೆ) 2001, ಚಿತ್ತಾರ (ಕಾವ್ಯ) 2004, ಕನ್ನಡ ಭಾಷಾ ಪ್ರವೇಶ (ಸಹಲೇಖಕರೊಂದಿಗೆ) 2005, ನಿಲುಮೆ (ವಿಮರ್ಶೆ) 2005, ನುಡಿಗವಳ ...
READ MORE