ಹಿರಿಯ ಲೇಖಕ ಕೆ.ಎಸ್. ಭಗವಾನ್ ಕುವೆಂಪು ಅವರ ಬದುಕು-ಬರವಣಿಗೆಯನ್ನು ಕುರಿತು ರಚಿಸಿದ ಪುಸ್ತಕವಿದು. ಆಧುನಿಕ-ನವೋದಯ ಸಾಹಿತ್ಯ ಘಟ್ಟದಿಂದ ಆರಂಭಿಸಿ ಕುವೆಂಪು ಅವರು ಜೀವಿಸಿದ್ದ ಕಾಲಾವಧಿ ಪೂರ್ತಿ ’ಕುವೆಂಪು ಯುಗ’ವಾಗಿತ್ತು ಎಂದು ಲೇಖಕರು ಪ್ರತಿಪಾದಿಸುತ್ತಾರೆ. ತಮ್ಮ ಪ್ರಖರ ವೈಚಾರಿಕತೆ ಹಾಗೂ ಬರವಣಿಗೆಯಿಂದ ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ ಮೇರು ಚೇತನ ಕುವೆಂಪು. ಅವರ ಬರವಣಿಗೆಯನ್ನು ಕುರಿತು ಭಗವಾನ್ ಅವರು ಕೃತಿಯಲ್ಲಿ ವಿವರವಾಗಿ ಕಟ್ಟಿಕೊಟ್ಟಿದ್ದಾರೆ.
ವಿಮರ್ಶಕ, ಅನುವಾದಕರಾದ ಕೆ.ಎಸ್.ಭಗವಾನ್ ಅವರು 14-07-1945ರಂದು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಡಿ.ಲಿಟ್.ಪದವಿಯನ್ನೂ ಪಡೆದಿದ್ದಾರೆ. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರಾದ ಭಗವಾನ್ ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು. ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿರುವ ಅವರು, ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅನುವಾದಕರಾಗಿ ಹೆಸರುವಾಸಿಯಾಗಿರುವ ಭಗವಾನ್ ಷೇಕ್ಸ್ ಪಿಯರ್ ನ ಒಂಬತ್ತು ಮಹತ್ವದ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರ ಕೃತಿ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ...
READ MORE