ಕೆ.ವಿ. ಸುಬ್ಬಣ್ಣ ಮಕ್ಕಳ ನಾಟಕಗಳು

Author : ಕೆ.ವಿ. ಸುಬ್ಬಣ್ಣ

Pages 204




Year of Publication: 2022
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 57741
Phone: 9480280401

Synopsys

ಕೆ.ವಿ. ಸುಬ್ಬಣ್ಣನವರು ರಚಿಸಿದ ಮಕ್ಕಳ ಸಾಹಿತ್ಯ ಕೃತಿ ʻಮಕ್ಕಳ ನಾಟಕಗಳುʼ. ಪುಸ್ತಕವು ಕಾಡಿನಲ್ಲಿ ಕಥೆ, ಅಂಚೆಮನೆ, ಬೆಟ್ಟಕ್ಕೆ ಚಳಿಯಾದರೆ, ಜಯಂಟ್ ಮಾಮಾ ಸೇರಿದಂತೆ ನಾಲ್ಕು ನಾಟಕಗಳನ್ನು ಒಳಗೊಂಡ ಸಂಕಲನವಾಗಿದೆ. ಬಹಳ ಹಿಂದೆ, ಬೇರೆಬೇರೆ ಸಂದರ್ಭಗಳಲ್ಲಿ ಪ್ರಯೋಗಕ್ಕೆಂದೇ ರಚಿತವಾದ ಈ ನಾಟಕಗಳು ಬಿಡಿಬಿಡಿಯಾಗಿ ಪ್ರಕಟವಾಗಿದ್ದು ಇದೇ ಮೊದಲ ಬಾರಿಗೆ ಒಟ್ಟಿಗೆ ಪ್ರಕಟಗೊಳ್ಳುತ್ತಿವೆ. ಇವತ್ತಿನ ಕಾಲದ ಮಕ್ಕಳ ಓದಿಗೂ, ರಂಗಪ್ರಯೋಗಗಳಿಗೂ ಮತ್ತು ರಂಗಭೂಮಿ ಕುರಿತ ಅಧ್ಯಯನಕ್ಕೂ ಈ ಸಂಕಲನ ಉಪಯುಕ್ತವಾಗುತ್ತದೆ.

About the Author

ಕೆ.ವಿ. ಸುಬ್ಬಣ್ಣ
(20 February 1931)

ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...

READ MORE

Related Books