ಪತ್ರಕರ್ತ ಲಕ್ಷ್ಮಣ ಕೊಡಸೆ ಅವರ ಅಂಕಣಗಳ ಬರಹ ಕೃತಿ-ಲಕ್ಷ್ಮಣ ರೇಖೆ. ಜೀವನ ಚರಿತ್ರೆ, ಕಾದಂಬರಿ, ನಾಟಕ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರದಲ್ಲಿ ಕೃಷಿ ಮಾಡಿರುವ ಲೇಖಕರು ತಾವು ಆಗಾಗ ಪತ್ರಿಕೆಗೆ ಬರೆದ ಅಂಕಣಗಳ ಬರಹಗಳನ್ನು ಸಂಗ್ರಹಿಸಿದ್ದಾರೆ. ವಿಷಯ ವಸ್ತು ವೈವಿಧ್ಯತೆ, ಸಾಮಾಜಿಕ ಹೊಣೆಗಾರಿಕೆ, ದೂರದೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಬರಹಗಳು ಪ್ರಾಮುಖ್ಯತೆ ಪಡೆಯುತ್ತವೆ.
ಕತೆಗಾರ, ಪತ್ರಕರ್ತ ಲಕ್ಷ್ಮಣ ಕೊಡಸೆ ಅವರು 1953 ಏಪ್ರಿಲ್ 12ರಂದು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೊಡಸೆ ಗ್ರಾಮದಲ್ಲಿ ಜನಿಸಿದರು. ತಾಯಿ ಭರ್ಮಮ್ಮ, ತಂದೆ ಕರಿಯನಾಯ್ಕ. ಹುಟ್ಟೂರು ಹಾಗೂ ಹೊಸನಗರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರಜಾವಾಣಿಯಲ್ಲಿ ಉಪಸಂಪಾದಕರಾಗಿ, ಮುಖ್ಯವರದಿಗಾರರಾಗಿ ಸುದ್ದಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ‘ಅಪ್ಪನ ಪರಪಂಚ, ಕೊಡಚಾದ್ರಿ, ಸಹಪಥಿಕ, ಅವ್ವ, ಬಿ. ವೆಂಕಟಾಚಾರ್ಯ, ಕುವೆಂಪು ಮತ್ತು, ಕನ್ನಡ ವಿಮರ್ಶಾ ವಿವೇಕ, ಹಾಯಿದೋಣಿ’ ಅವರ ಪ್ರಮುಖ ಕೃತಿಗಳು. ...
READ MORE