ಮಾಸ್ಟರ್ ಹಿರಣ್ಣಯ್ಯ ಅವರು ರಚಿಸಿ, ನಿರ್ದೇಶಿಸಿದ ‘ಲಂಚಾವತಾರ’ ನಾಟಕವು 1956ರ ಡಿಸೆಂಬರ್ 30 ರಂದು ಶಿವಮೊಗ್ಗದಲ್ಲಿ ಪ್ರಪ್ರಥಮ ಪ್ರದರ್ಶನ ಕಂಡಿತು. ಆತ್ಮ ಗೌರವವನ್ನು ಕಳೆದು ಕೊಂಡರೆ ಏನಾಗುತ್ತದೆ ಎಂಬುದನ್ನು ತಿಳಿಸಿಕೊಡುವ ರಾಜಕೀಯ ವಿಡಂಬನಾತ್ಮಕ ನಾಟಕವಿದು. ಈವರೆಗೂ 11ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಂಡು ವಿದೇಶದಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ.
ಲೇಖಕ, ನಾಟಕಕಾರ, ಚಲನಚಿತ್ರ- ಸಂಗೀತ ನಿರ್ದೇಶಕ ಯೋಗೇಶ್ ಮಾಸ್ಟರ್ ಅವರು ಜನಪ್ರಿಯ-ಪ್ರಮುಖ ಲೇಖಕರು. ಕಾದಂಬರಿ-ನಾಟಕ-ಕವಿತೆ-ಮಕ್ಕಳ ಸಾಹಿತ್ಯ ಹೀಗೆ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಬರೆಯುತ್ತಿರುವ ಮಾಸ್ಟರ್ ಅವರು ಇದುವರೆಗೆ 230ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಕಾವ್ಯ, ಕತೆ, ಕಾದಂಬರಿ, ಪ್ರಬಂಧಗಳು, ಸಂಶೋಧನಾ ಲೇಖನಗಳು, ನಾಟಕ, ಮಕ್ಕಳ ಸಾಹಿತ್ಯ, ಮನೋವೈಜ್ಞಾನಿಕ ಮತ್ತು ವೈಚಾರಿಕ ಲೇಖನಗಳು, ಗೀತನಾಟಕ, ಚಿತ್ರಕತೆ, ಸಂಭಾಷಣೆ ಮತ್ತು ಗೀತ ಸಾಹಿತ್ಯಗಳ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ಹೆಸರಿಸಲು ಕೆಲವು, ಮರಳಿ ಮನೆಗೆ, ಜೀವನ ಸಂಜೀವನ, ಕೊನೆಯ ಅಂಕ, ಮಳೆ ಬಂದು ನಿಂತಾಗ, ಅಮೃತ, ಸಮಾನಾಂತರ ರೇಖೆಗಳು, ರಾಧೇ ಶ್ಯಾಮನ ಪ್ರೇಮ ...
READ MORE