ಜಾಗತಿಕ ಸಾಹಿತ್ಯದಲ್ಲಿ ಅಪೂರ್ವ ತಾರೆಯಾಗಿ ಎಂದೆಂದಿಗೂ ಮಿನುಗುತ್ತಿರುವ ಲಿಯೊ ಟಾಲ್ಸ್ಟಾಯ್ ಅವರ ಆತ್ಮಚರಿತ್ರೆಯ ಕನ್ನಡ ಅನುವಾದವಾಗಿದೆ ಈ ಕೃತಿ. ಇದನ್ನು ಆನಂದರವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಶೈಶವ, ಬಾಲ್ಯ, ಮತ್ತು ಯೌವನ ಎಂಬ ಮೂರು ಭಾಗಗಳನ್ನೊಳಗೊಂಡ ಈ ಕೃತಿಯು ಸಾಹಿತ್ಯಿಕ ಕೋನದಿಂದಷ್ಟೇ ಅಲ್ಲದೆ ಸಾಮಾಜಿಕ ಮತ್ತು ರಾಜಕೀಯ ಇತಿಹಾಸಗಳ ದೃಷ್ಟಿಯಿಂದಲೂ ಗಮನ ಸೆಳೆದಿದೆ. ಇದರಲ್ಲಿ ಅವರ ಬಹು ಸೂಕ್ಷ್ಮವಾದ ಮನಶ್ಶಾಸ್ತ್ರೀಯ ವಿಶ್ಲೇಷಣೆ, ಭಾವುಕತೆ, ಗಂಭೀರತೆ ಮತ್ತು ವಾಸ್ತವಿಕತೆಗಳನ್ನುಈ ಕೃತಿಯೂ ಒಳಗೊಂಡಿದೆ.
’ಆನಂದ’ ಎಂಬ ಕಾವ್ಯನಾಮದಿಂದ ಬರೆಯುತ್ತಿದ್ದ ಅಜ್ಜಂಪುರ ಸೀತಾರಾಂ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ಮಾಸ್ತಿಯವರ ಸಣ್ಣಕಥಾ ಪರಂಪರೆಯಲ್ಲಿ ಆನಂದರು ಹೆಜ್ಜೆಗುರುತು ಮೂಡಿಸುವ ಬರವಣಿಗೆ. ಇವರು ಜನಿಸಿದ್ದು 1902 ಆಗಸ್ಟ್ 18ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಜನಿಸಿದರು. ಸೀತಾರಾಮ್ ಅವರ ಪ್ರಾರಂಭಿಕ ಶಿಕ್ಷಣ ಆಂಗ್ಲೋವರ್ನಾಕ್ಯುಲರ್ ಶಾಲೆಯಲ್ಲಿ ನಡೆಯಿತು. ಹೈಸ್ಕೂಲು ಹಾಗೂ ಜ್ಯೂನಿಯರ್ ಕಾಲೇಜು ವಿದ್ಯಾಭ್ಯಾಸ ಶಿವಮೊಗ್ಗದಲ್ಲಿ ನಡೆಯಿತು. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಿಂದ ಬಿ.ಎಸ್‌ಸಿ ಪದವಿ ಗಳಿಸಿದರು. ಕೈಲಾಸಂರವರು ಶಿವಮೊಗ್ಗದಲ್ಲಿದ್ದಾಗ ಅವರ ಪ್ರಭಾವಕ್ಕೆ ಒಳಗಾಗಿದ್ದರು. ಹೈಸ್ಕೂಲಿನಲ್ಲಿ ಗುರುಗಳಾಗಿ ದೊರೆತಿದ್ದ ಎಂ.ಆರ್.ಶ್ರೀ ಮತ್ತು ಕುಕ್ಕೆ ಸುಬ್ರಹ್ಮಣ್ಯಶಾಸ್ತ್ರಿಗಳು ಸಾಹಿತ್ಯಾಭ್ಯಾಸಕ್ಕೆ ಉತ್ತೇಜನ ...
READ MORE