ಲಿಯೋನಾರ್ಡೊ ಡಾ ವಿಂಚಿ ಎಂದ ಕುಡಲೇ ನಮ್ಮ ಸ್ಮೃತಿ ಪಟಲದ ಮುಂದೆ ಬಂದೋಗುವುದು 'ಮೊನಾಲಿಸಾ'ಳ ಚಿತ್ರ. ಮೊನಾಲಿಸಾ ಚಿತ್ರದ ಸೃಷ್ಟಿಕರ್ತ ಲಿಯೊನಾರ್ಡೊ ಡಾ ವಿಂಚಿ. ಬರಿ ಕಲಾವಿದನಷ್ಟೆ ಅಲ್ಲದೆ ವಿಜ್ಞಾನ, ತಂತ್ರಜ್ಞಾನಿ, ವಾಸ್ತುಶಿಲ್ಪ, ವೈದ್ಯ ವಿಜ್ಞಾನ ಎಲ್ಲವನ್ನೂ ತಿಳಿದಿದ್ದವರು. ಇವರ ಕುರಿತು ಬೆ.ಗೋ. ರಮೇಶ್ ಅವರು ಪರಿಚಯಿಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಮಾಡಿದ್ದಾರೆ. ವಿಂಚಿಯ ಬಾಲ್ಯ, ವೃತ್ತಿಯ, ಹವ್ಯಾಸಗಳ ಕುರಿತು ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿದೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE