ಸಮಾಜವಾದದ ಅಗತ್ಯತೆಯನ್ನು ಒಪ್ಪಿಕೊಳ್ಳುತ್ತಲೇ ಜಾತಿ ಮತ್ತು ವರ್ಗಗಳ ಸ್ವರೂಪ ಹಾಗೂ ಚಲನೆಗಳನ್ನು ಲೋಹಿಯಾ ಪರಿಗ್ರಹಿಸಿರುವ ರೀತಿ ಏಕೆ ಸರಿಯಾದ ಕ್ರಮವಲ್ಲ ಎಂಬುದನ್ನು ಈ ಕೃತಿ ಸವಿಸ್ತಾರವಾಗಿ ಚರ್ಚಿಸುತ್ತದೆ. `ವರ್ಗ ಎಂದರೆ ಚಲನಸಾಮರ್ಥ್ಯವುಳ್ಳ ಜಾತಿ’ ಎನ್ನುವ ಲೋಹಿಯಾ ಅವರ ಗ್ರಹಿಕೆಯನ್ನು ವೈಜ್ಞಾನಿಕ ನಿಷ್ಕರ್ಷೆಗೆ ಒಡ್ಡಿದಾಗ ಆಗುವ ದುಷ್ಪರಿಣಾಮಗಳೇನು ಎಂಬುದನ್ನು ತಮ್ಮದೇ ತರ್ಕದೊಂದಿಗೆ ಇಲ್ಲಿ ವಿವರಿಸಿದ್ದಾರೆ ಲೇಖಕ ಯಡೂರು ಮಹಾಬಲ. ಲೋಹಿಯಾರ ಅರ್ಥಶಾಸ್ತ್ರದ ಕುರಿತು ತಳೆದಿರುವ ನಿಲುವುಗಳನ್ನು ಈ ಕೃತಿಯಲ್ಲಿ ವಿಮರ್ಶೆಗೆ ಒಳಪಡಿಸಿದ್ದಾರೆ.
ಯಡೂರ ಮಹಾಬಲ ಅವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಗ್ರಾಮದವರು.ಭಾರತ ವಿದ್ಯಾರ್ಥಿ ಫೆಡರೇಶನ್, ಸಮುದಾಯ ಸಾಂಸ್ಕೃತಿಕ ಸಂಘಟನೆ, ನೌಕರ ಮತ್ತು ಕಾರ್ಮಿಕರ ಹೋರಾಟ ಸಂಘಟನೆಗಳಲ್ಲಿ ಭಾಗಿಯಾಗಿದ್ದರು. ಹುಬ್ಬಳ್ಳಿಯಲ್ಲಿ ಗೆಳೆಯರೊಂದಿಗೆ ಸಮತಾ ಪ್ರಕಾಶನ ಕಾರ್ಯದಲ್ಲಿ ತೊಡಗಿ ಅನೇಕ ಕಿರುಹೊತ್ತಿಗೆಗಳನ್ನು ಹೊರತಂದಿದ್ದಾರೆ. ಬ್ಯಾಂಕ್ ಅಧಿಕಾರಿಯಾಗಿ 2014 ರಲ್ಲಿ ನಿವೃತ್ತಿಹೊಂದಿದ್ದಾರೆ. ‘ಲೋಹಿಯಾ ವಿಚಾರಗಳ ಒಂದು ವಿಮರ್ಶೆ’, ‘ಕ್ವಿಟ್ ಇಂಡಿಯಾ ಚಳವಳಿಯ ಒಳಗುಟ್ಟುಗಳು’, ‘ದೋಕ್ಲಾಂ ಕರ್ಮಕಾಂಡ’, ‘ಅವಿಸ್ಮರಣೀಯ ಅರುಣಾಚಲ, ಅದರ ಚಿತ್ರ ವಿಚಿತ್ರ ಇತಿಹಾಸ’, ನಿಗೂಢ ಟಿಬೇಟ್, ಅಕ್ಸಾಯ್ ಚಿನ್ ವಿವಾದದ ಇತಿಹಾಸ, ‘ಯುದ್ಧಪೂರ್ವ ಕಾಂಡ’ ‘1962 ಯುದ್ಧ ಕಾಂಡ' ಕೃತಿಗಳನ್ನು ...
READ MORE