ಕಾಂತಾವರದಲ್ಲಿ ಕನ್ನಡ ಸಂಘ ಕಟ್ಟುವ ಮೂಲಕ ಕನ್ನಡ ನಾಡು ಮತ್ತು ಸಾಹಿತ್ಯಕ್ಕೆ ಅಪರೂಪದ ಕೊಡುಗೆ ನೀಡುತ್ತಿರುವ ಕವಿ ನಾ ಮೊಗಸಾಲೆಯವರ ಬಗ್ಗೆ ಲೇಖಕಿ ದೀಫಾ ಫಡ್ಕೆ ಬರೆದಿರುವ ಕೃತಿ. ಮೊಗಸಾಲೆಯವರ ಬದುಕು ಮತ್ತು ಕೃತಿಗಳ ಬಗ್ಗೆ ಲೇಕಕಿ ಇಲ್ಲಿ ಆಪ್ತವಾಗಿ ಬರೆದಿದ್ದಾರೆ. ಕಡೆಯಲ್ಲಿ ಮೊಗಸಾಲೆಯವರ ಕೃತಿಗಳು, ಸಂದ ಪ್ರಶಸ್ತಿ ಪುರಸ್ಕಾರಗಳ ವಿವರವೂ ಇದ್ದು, ಆಕರದಂತೆ ಒದಗಲಿದೆ.
ಬೆಂಗಳೂರಿನಲ್ಲಿ ನೆಲೆಸಿರುವ ಡಾ. ದೀಪಾ ಫಡ್ಕೆ ಅವರು ಮೂಲತಃ ದಕ್ಷಿಣಕನ್ನಡದ ಬೆಳ್ತಂಗಡಿಯವರು. ಉಜಿರೆಯಲ್ಲಿ ಪದವಿ ಪಡೆದು, ಕನ್ನಡ ಎಂ.ಎ. ಪದವಿಯನ್ನು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ. 'ಪುರಂದರ ಕನಕರ ಕೀರ್ತನೆ ಗಳಲ್ಲಿ ಅಭಿವ್ಯಕ್ತಿ : ಮನೋವೈಜ್ಞಾನಿಕ ಅಧ್ಯಯನ' ಎನ್ನುವ ವಿಷಯದಲ್ಲಿ ಅಧ್ಯಯನ ನಡೆಸಿರುವ ದೀಪಾ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿ ದೊರೆತಿದೆ. ದೀಪಾ ಫಡ್ಡೆಯವರು, ಸಂಸ್ಕೃತಿ ಕುರಿತ ಬರಹಗಳ ಗುಚ್ಛವಾದ 'ಋತ', ’ಹರಪನಹಳ್ಳಿ ಭೀಮವ್ವ', 'ಡಾ. ಪ್ರದೀಪಕುಮಾರ್ ಹೆಬ್ರಿ-ಮಹಾಕಾವ್ಯಗಳ ಕವಿ' ಹಾಗೂ ’ಲೋಕಸಂವಾದಿ' (ಮೊಗಸಾಲೆಯವರ ಬದುಕು ಬರಹಗಳ ಕುರಿತು), ನಾಡಿಗೆ ನಮಸ್ಕಾರ ಮಾಲೆಗಾಗಿ ಈ ಕೃತಿಯಲ್ಲದೆ ...
READ MORE