ಪ್ರತಿಭಾನ್ವಿತ ಕಲಾವಿದ ಎಂ.ಎಫ್. ಹುಸೇನ್ ಅವರ ಜೀವನ ಚರಿತ್ರೆಯೇ ಈ ಕೃತಿ. ಎನ್. ಮರಿಶಾಮಾಚಾರ್ ಬರೆದಿದ್ದಾರೆ. ಭಾರತದ ಸಮಕಾಲೀನ ಕಲೆಯಲ್ಲಿ ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಯೋಗಶೀಲ ಕಲಾವಿದ ಎಂದು ಹೆಸರು ಪಡೆದ ಎಂ.ಎಫ್. ಹುಸೇನ್. ಅವರಿಗೆ ಬಹುಮುಖ ಪ್ರತಿಭೆ ಇದ್ದರೂ, ಭಾರತೀಯತೆಯ ಚಿತ್ರಗಳನ್ನು ರಚಿಸಿರುವುದನ್ನು ಕಾಣುತ್ತೆೇವೆ. ಅವರು ಸಾಂಪ್ರದಾಯಿಕವಾಗಿ ಜಾನಪದವನ್ನು ವಿಶಿಷ್ಟವಾಗಿ ತಮ್ಮ ಚಿತ್ರಗಳಲ್ಲಿ ಬಳಸಿಕೊಂಡು, ಪೂರ್ವ-ಪಶ್ಚಿಮದ ಮಿಲನದಿಂದ ಹೊಸ ಅಭಿವ್ಯಕ್ತಿಗೆ ಕಾರಣಕರ್ತರಾಗಿದ್ದರು. ಅಂತಹ ಮೇರು ಕಲಾವಿದ ಹುಸೇನ್ ಅವರ ಕಲಾ ಬದುಕಿನ ಚಿತ್ರಣವನ್ನು ಈ ಕೃತಿಯಲ್ಲಿ ಅರ್ಥಪೂರ್ಣವಾಗಿ ಕಟ್ಟಿಕೊಡಲಾಗಿದೆ.
ಕರ್ನಾಟಕದ ಕಲಾವಲಯದ ಹಿರಿಯರು ’ಮರಿ’ ಎಂದು ಕರೆಯುತ್ತಿದ್ದ ಎನ್. ಮರಿಶಾಮಾಚಾರ್ ಅವರು ರಾಜ್ಯದ ಅಪರೂಪದ ಕಲಾಪರಿಚಾರಕ-ಲೇಖಕ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮರಿಶಾಮಾಚಾರ್ ಅವರು ಕಲಾಸಾಹಿತಿ. ’ನಡೆದಾಡುವ ಕಲಾಕೋಶ’ ಎಂದು ಕಲಾವಲಯದಲ್ಲಿ ಅವರನ್ನು ಗುರುತಿಸಲಾಗುತ್ತಿತ್ತು. ವಿಜಯಪುರದಲ್ಲಿ 1951ರ ಮೇ 15ರಂದು ಜನಿಸಿದ ಮರಿಶಾಮಾಚಾರ್ ಅವರು ಜಯನಗರದ ಆರ್.ವಿ. ಹೈಸ್ಕೂಲಿನಲ್ಲಿ ಓದುತ್ತಿರುವಾಗ ಡ್ರಾಯಿಂಗ್ ಮಾಡಲು ಆರಂಭಿಸಿದ್ದರು. ಅವರ ಅಣ್ಣ ಕೆನ್ ಶಾಲೆಯ ವಿದ್ಯಾರ್ಥಿಯಾಗಿದ್ದ. ಕಲೆಯ ಅಭಿರುಚಿ ಬಂದದ್ದು ಅವರ ಅಣ್ಣನಿಂದಲೇ. ಅಣ್ಣನ ಮೂಲಕ ಪರಿಚಯವಾದ ಕಲಾಗುರು ಆರ್.ಎಂ. ಹಡಪದ ಅವರ ಶಿಷ್ಯರಾಗಿದ್ದ ’ಮರಿ’ ಅವರು ಅವರ ಬಳಿ ಐದು ವರ್ಷ ...
READ MORE