’ಗೆಜ್ಜೆಪೂಜೆ’, ’ಫಣಿಯಮ್ಮ’ ರೀತಿಯ ಕೃತಿಗಳನ್ನು ಕನ್ನಡಕ್ಕೆ ನೀಡಿದ ಎಂ.ಕೆ. ಇಂದಿರಾ ಅವರ ಮೂವತ್ತು ವೈವಿಧ್ಯಮಯ ಕತೆಗಳು ಸಂಪುಟದಲ್ಲಿವೆ. ೨೦ನೇ ಶತಮಾನದಲ್ಲಿದ್ದ ಕೌಟುಂಬಿಕ-ಸಾಮಾಜಿಕ ಸಮಸ್ಯೆಗಳು, ಸ್ವಾರ್ಥ-ತ್ಯಾಗದಂತಹ ಎಣ್ಣೆ-ಸೀಗೆಕಾಯಿ ವಿಚಾರಗಳು, ಸಂಕೀರ್ಣ ಸಂಬಂಧಗಳು ಅವರ ಕತೆಗಳ ಮುಖ್ಯವಸ್ತು.
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು 05-01-1917 ರಂದು. ಊರು ಮಲೆನಾಡಿನ ತೀರ್ಥಹಳ್ಳಿ. ತಂದೆ ತರೀಕೆರೆ ಸೂರ್ಯನಾರಾಯಣ, ತಾಯಿ ಬನಶಂಕರಮ್ಮ. ಇಂದಿರಾ ಓದಿದ್ದು, ಕನ್ನಡ ಮಾಧ್ಯಮಿಕ ಶಾಲೆಯ 2ನೇಯ ತರಗತಿವರೆಗೆ ಮಾತ್ರ. ತಮ್ಮ 12 ವರ್ಷಕ್ಕೆ ಮದುವೆಯಾಯಿತು. ಅವರು ಬರೆಯಲು ಆರಂಭಿಸಿದ್ದು 1963ರಲ್ಲಿ. ತುಂಗಭದ್ರ ಅವರ ಮೊದಲ ಕೃತಿ. ಮಲೆನಾಡಿನ ಸಹ್ಯಾದ್ರಿಶ್ರೇಣಿ, ಭೀಮವೃಕ್ಷರಾಜಿ, ಹಕ್ಕಿಗಳ ಇಂಚರ, ಹಸಿರು.ಇವೆಲ್ಲವೂ ಇಂದಿರ ಅವರ ಕಾದಂಬರಿಗಳಲ್ಲಿ ರಾರಾಜಿಸಿರುತ್ತವೆ. ಅವರ ಮೊಟ್ಟಮೊದಲ ಕಾದಂಬರಿ "ತುಂಗಭದ್ರ"."ತುಂಗಭದ್ರೆ"ಯನ್ನು ಮೆಚ್ಚಿಕೊಂಡು ಕೀರ್ತಿನಾಥ ಕುರ್ತಕೋಟಿಯವರು ಒಂದು ಧೀರ್ಘವಾದ ಮುನ್ನುಡಿ ಬರೆದರು.ಈ ಕಾದಂಬರಿ ವಿಶ್ವವಿದ್ಯಾನಿಲಯದ ಪದವಿ ...
READ MORE