ಕಥೆಗಾರ ಎಂ. ವ್ಯಾಸ ಅವರು. ಸಭೆ, ಸಮಾರಂಭ ಎಂದರೆ ನಿಲ್ಲುತ್ತಿದ್ದ ಲೇಖಕ. ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕಥೆಗಳನ್ನು ನೀಡಿದ ವ್ಯಾಸ ಅವರು ಅನೇಕರ ದೃಷ್ಟಿಯಲ್ಲಿ ವಿಕ್ಷಿಪ್ತರು. ಕಂಬನಿ ಅವರ ಮೊದಲ ಕಥಾ ಸಂಕಲನ. ಸುಳಿ ಮೊದಲ ಕವನ ಸಂಕಲನ. ’ಕ್ಷೇತ್ರ ಮತ್ತು ಜನಪಥ’ ಅವರ ವೈಚಾರಿಕ ಕೃತಿಗಳು ಮತ್ತು ’ಸ್ನಾನ’ ಎಂಬ ಕಿರು ಕಾದಂಬರಿಯನ್ನೂ ಪ್ರಕಟಿಸಿದ್ದರು. ಎಂ. ವ್ಯಾಸ ಅವರ ಜೀವನ-ಸಾಧನೆಯನ್ನು ಪರಿಚಯಿಸುವ ಕೃತಿಯಿದು. ಕಾಂತಾವರ ಕನ್ನಡ ಸಂಘ ಪ್ರಕಟಿಸುತ್ತಿರುವ ನಾಡಿಗೆ ನಮಸ್ಕಾರ ಸರಣಿಯ 166ನೇ ಕೃತಿ.
ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಡಾ. ವರದರಾಜ ಚಂದ್ರಗಿರಿ ಅವರು ಖ್ಯಾತ ಸಾಹಿತಿ, ಚಿಂತಕರಾಗಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಪರಿಚಿತರಾಗಿದ್ದಾರೆ. ಅವರು ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರಾಗಿ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ. ...
READ MORE