ಮಾಧ್ಯಮ ಮಾರ್ಗ

Author : ಪದ್ಮರಾಜ ದಂಡಾವತಿ

Pages 209

₹ 150.00




Year of Publication: 2018
Published by: ಸಪ್ಪ ಬುಕ್ ಹೌಸ್
Address: ಗಾಂಧಿನಗರ 3ನೇ ಮುಖ್ಯ ರಸ್ತೆ, ಬೆಂಗಳೂರು.
Phone: 08040114455

Synopsys

ಮಾಧ್ಯಮ ಕ್ಷೇತ್ರದಲ್ಲಿರುವ ಅನೈತಿಕ ಪೈಪೊಟಿಯು ಮಾಧ್ಯಮ ವೃತ್ತಿ ಮಾಡುವವರನ್ನು ವಿಪರೀತ ಒತ್ತಡದಲ್ಲಿ ಸಿಲುಕಿಸಿದೆ.ಸುದ್ದಿ ಮತ್ತು ಜಾಹೀರಾತುಗಲಳ ನಡುವಿನ ಅಂತರ ಕಡಿಮೆಯಾಗುತ್ತಿದೆ.ಎಲೆಕ್ಟ್ರಾನಿಕ್ ಮಾಧ್ಯಮವು ಮುದ್ರಣ ಮಾಧ್ಯಮದ ಮೇಲೆ ಪ್ರಭಾವ ಬಿರುತ್ತಿದೆ.ರಾಜಕೀಯ ಪಕ್ಷಗಳ ಮುಖಂಡರು ಮಾಧ್ಯಮ ಸಂಸ್ಥೆಗಳ ಒಡೆಯರಾಗುತ್ತಿದ್ದಾರೆ.ಈ ವಿದ್ಯಮಾನಗಳು ಮಾಧ್ಯಮ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ಮುಡಿಸುತ್ತದೆ.ಇಂದಿನ ಮಾಧ್ಯಮ ಪೀಳಿಗೆಗೆ ಭಾಷಾ ಜ್ಞಾನದ ಕೊರತೆ ಎದ್ದು ಕಾಣುತ್ತಿದೆ. ಇಂಥ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನಗಳ ಮೂಲಕ ಕಿರಿಯ ಮಾಧ್ಯಮ ಮಿತ್ರರಿಗೆ ಮತ್ತು ಈ ಕ್ಷೇತ್ರಕ್ಕೆ ಪ್ರವೇಶ ಮಾಡುತ್ತಿರುವ ಪತ್ರಕರ್ತರಿಗೆ ತಮ್ಮ ಅನುಭವನ್ನು ವಿವರಿಸಿದ್ದಾರೆ.

About the Author

ಪದ್ಮರಾಜ ದಂಡಾವತಿ
(30 August 1955)

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದಲ್ಲಿ 1955ರ ಆಗಸ್ಟ್ 30 ರಂದು ಪದ್ಜರಾಜ ದಂಡಾವತಿ ಅವರು ಜನಿಸಿದರು. ತಂದೆ ದೇವೇಂದ್ರಪ್ಪ, ತಾಯಿ ಚಂಪಮ್ಮ. ಪ್ರಾಥಮಿಕ- ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುದ್ದೇಬಿಹಾಳದಲ್ಲಿ ಮುಗಿಸಿ, ಪದವಿ ಶಿಕ್ಷಣವನ್ನು ರಾಮದುರ್ಗದಲ್ಲಿ ಪೂರೈಸಿದರು. ಧಾರವಾಡದ ಕರ್ನಾಟಕ ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದರು. ಪತ್ರಕರ್ತರಾಗಿ 1982ರಲ್ಲಿ ಪ್ರಜಾವಾಣಿ ಸೇರಿದ್ದು, ಹಂತ ಹಂತವಾಗಿ ಬಡ್ತಿ ಹೊಂದಿ ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು. ಸತತ ಎಂಟು ವರ್ಷಗಳಿಂದ ಅವರು ಪ್ರತಿ ಭಾನುವಾರ ಪ್ರಜಾವಾಣಿಯಲ್ಲಿ ಬರೆದ ‘ನಾಲ್ಕನೇ ಆಯಾಮ’ ಅಂಕಣ, ತನ್ನವಿಚಾರ-ವಿಷಯ ವೈವಿಧ್ಯತೆಯಿಂದಾಗಿ ಜನಪ್ರಿಯತೆ ಪಡೆದಿತ್ತು.  ಕೃತಿಗಳು:  ಪತ್ರಿಕಾಭಾಷೆ, ರಿಪೋರ್ಟಿಂಗ್, ಅವಲೋಕನ, ನಾಲ್ಕನೇ ಆಯಾಮ(ಆರು ...

READ MORE

Related Books