‘ಮಾನಸಿಕ ಆರೋಗ್ಯ ನಿಮ್ಮ ಮಕ್ಕಳು ನಿಮ್ಮ ಪ್ರಶ್ನೆಗಳು’ ಲೇಖಕ, ಮನೋವೈದ್ಯ ಸಿ. ಆರ್. ಚಂದ್ರಶೇಖರ್ ಅವರು ಬರೆದಿರುವ ಕೃತಿ. ಈ ಕೃತಿಯಲ್ಲಿ ಮಕ್ಕಳನ್ನು ಬೆಳೆಸಬೇಕಾದ ವಾತಾವರಣ ಮತ್ತು ಮಕ್ಕಳ ಮಾನಸಿಕ ಆರೋಗ್ಯಕ್ಕಾಗಿ ಪೋಷಕರು ವಹಿಸಬೇಕಾದ ಎಚ್ಚರಗಳ ಬಗ್ಗೆ ವಿವರಿಸಿದ್ದಾರೆ. ಸ್ವತಃ ಮನೋವೈದ್ಯರಾಗಿರುವ ಚಂದ್ರಶೇಖರ್ ಅವರು ಪೋಷಕರಿಗೆ ಹಲವು ಸಲಹೆಗಳನ್ನು ಈ ಕೃತಿಯ ಮೂಲಕ ನೀಡಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE