ಮಾನಸಿಕ ಒತ್ತಡದಿಂದ ಹೊರ ಬನ್ನಿ

Author : ಸಿ.ಆರ್. ಚಂದ್ರಶೇಖರ್

Pages 133

₹ 81.00




Year of Publication: 2017
Published by: ಸಪ್ನ ಬುಕ್ ಹೌಸ್
Address: ಗಾಂಧಿನಗರ, ಬೆಂಗಳೂರು

Synopsys

ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಮಾನಸಿಕ ಒತ್ತಡದಿಂದ ಹೊರ ಬನ್ನಿ. ಮಾನಸಿಕ ಒತ್ತಡವು ಮನೋ-ದೈಹಿಕವಾಗಿ ಮನುಷ್ಯನನ್ನು ಕುಗ್ಗಿಸುತ್ತದೆ. ಬದುಕು ಎಂದರೆ ಒತ್ತಡರಹಿತವಲ್ಲ; ಅದು ಒತ್ತಡವೇ ತುಂಬಿದ ಸ್ಥಿತಿ. ಒತ್ತಡವನ್ನು ಹೇಗೆ ನಿರ್ವಹಿಸಬೇಕು? ಒತ್ತಡ ಎಂದರೇನು? ಅದರ ಪ್ರಕಾರಗಳು ಇತ್ಯಾದಿ ಕುರಿತು ಮಾಹಿತಿ ನೀಡುವ ಕೃತಿ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books