‘ಮಾಸದ ವಿಜಯ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಲೇಖನಗಳ ಸಂಕಲನ. ಯಶಸ್ಸು ಎನ್ನುವುದು ಎಲ್ಲರ ಕನಸು ಆ ಕನಸ್ಸನ್ನು ನನಸಾಗಿಸಲು ಬೇಕಾಗುವ ಮಾರ್ಗದರ್ಶನ, ಮನಸ್ಥಿತಿ ಹೇಗೆ ರೂಪುಗೊಳ್ಳುತ್ತದೆ ಎಂಬುದನ್ನು ಇಲ್ಲಿಯ ಲೇಖನಗಳಲ್ಲಿ ಕಾಣಬಹುದಾಗಿದೆ. ವ್ಯಕ್ತಿ ವಿಕಸನಕ್ಕೆ ಸಂಬಂಧಿಸಿದ ಈ ಲೇಖನಗಳು ಸಾಧನೆಯತ್ತ ಸದಾ ತುಡಿಯುವವರಿಗೆ ಮಾರ್ಗಸೂಚಿಗಳಾಗುತ್ತವೆ.
ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು- ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...
READ MORE