ಮಾತಾಡದ ಮಲ್ಲಿಗೆ

Author : ಹೆಚ್.ಜಿ. ರಾಧಾದೇವಿ

Pages 160

₹ 80.00




Year of Publication: 2004
Published by: ಗೀತಾಂಜಲಿ ಪಬ್ಲಿಕೇಷನ್ಸ್
Address: ಬೆಂಗಳೂರು

Synopsys

'ಮಾತಾಡದ ಮಲ್ಲಿಗೆ'ಯಲ್ಲಿ ಕೌಟುಂಬಿಕ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಕತೆಯ ಎಳೆಯಿಂದ ನಾಲ್ಕು ಉದ್ಯೋಗಸ್ಥ ಹುಡುಗಿಯರ ಬವಣೆಯನ್ನು ಚಿತ್ರಿಸಿದ್ದಾರೆ ಕಾದಂಬರಿಕಾರ್ತಿ. ದುಡಿಯುವ ಜವಾಬ್ದಾರಿಯೊಂದಿಗೆ ಹರೆಯದಲ್ಲಿ ಮೂಡುವ ಸಹಜ ಆಕಾಂಕ್ಷೆಗಳಲ್ಲಿ ಸಮನ್ವಯ ಸಾಧಿಸಲು ತುಡಿಯುವ ಹೆಂಗೆಳೆಯರ ಮನಸ್ಸಿನ ವಿವಿಧ ಸ್ತರಗಳನ್ನು ನವಿರಾಗಿ ಈ ಕಾದಂಬರಿಯಲ್ಲಿ ತೆರೆದಿಟ್ಟಿದ್ದಾರೆ.

About the Author

ಹೆಚ್.ಜಿ. ರಾಧಾದೇವಿ
(30 January 1952 - 09 November 2006)

ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.  ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ  ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...

READ MORE

Related Books