ಲೇಖಕರಾದ ಸಿಬಂತಿ ಪದ್ಮನಾಭ ಕೆ. ವಿ. ಹಾಗೂ ಶ್ರೀಶ ಎಂ. ಪುಣಚ ಅವರು ಮಾಧ್ಯಮದ ಬಗ್ಗೆ ಬರೆದಿರುವ ಕೃತಿ ಮಾಧ್ಯಮ ತಂತ್ರಜ್ಞಾನ. ಕೃತಿಯಲ್ಲಿ ಬೇಳೂರು ಸುದರ್ಶನ ಅವರ ಮುನ್ನುಡಿಯ ಮಾತುಗಳಿವೆ. ಅವರು ಹೇಳುವಂತೆ, ಮಾಹಿತಿ ತಂತ್ರಜ್ಞಾನ, ಮಾಧ್ಯಮ ತಂತ್ರಜ್ಞಾನ – ಎಲ್ಲವೂ ನಾಡಿನ ಕಷ್ಟ ಸುಖಗಳನ್ನು ವರದಿಗಳ ಮೂಲಕ, ವಿವಿಧ ಮಾಧ್ಯಮಗಳ ಮೂಲಕ ಜನತೆಗೆ ತಲುಪಿಸುವ, ಸರ್ಕಾರಕ್ಕೆ ತಿಳಿಸುವ ಮೂಲ ಹೊಣೆಗಾರಿಕೆಗೆ ಸಹಕಾರಿಯಾಗುವ ಅಂಶಗಳೇ ಹೊರತು, ತಂತ್ರಜ್ಞಾನವೇ ಎಲ್ಲದಕ್ಕೂ ಪರಿಹಾರವಲ್ಲ. ತಂತ್ರಜ್ಞಾನವನ್ನು ಅರಿತರೆ ಪತ್ರಕರ್ತರು ಖಂಡಿತ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸಿಕೊಳ್ಳಬಹುದು. ಪತ್ರಿಕಾರಂಗದಲ್ಲೂ ಉದ್ಯೋಗದ ಅವಕಾಶಗಳು ವೈವಿಧ್ಯವೂ, ವಿಸ್ತಾರವೂ ಆಗಿರುವ ಈ ಹೊತ್ತಿನಲ್ಲಿ ಈ ಪುಸ್ತಕವು ಹೊಸಕಾಲದ ಉದ್ಯೋಗಾವಕಾಶಗಳಿಗೆ ಕಿಟಕಿಯಾಗಿದೆ ಎಂದಿದ್ದಾರೆ.
ಸಿಬಂತಿ ಪದ್ಮನಾಭ ಕೆ. ವಿ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದವರು. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಬಿಎ ವ್ಯಾಸಂಗ , ಆನಂತರ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯೊಂದಿದ್ದು ಫೆಲೋಶಿಪ್‌ಗೆ ಆಯ್ಕೆಯಾಗಿ, 'ವಿಜಯ್ ಟೈಮ್' ಹಾಗೂ 'ಡೆಕ್ಕನ್ ಹೆರಾಲ್ಡ್' ದೈನಿಕಗಳಲ್ಲಿ ಪತ್ರಕರ್ತರಾಗಿದ್ದರು. ಪ್ರಸ್ತುತ ತುಮಕೂರು ವಿಶ್ವವಿದ್ಯಾನಿಲಯದ ಘಟಕ ಸಂಸ್ಥೆ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಸಹಾಯಕ ಪ್ರಾಧ್ಯಾಪಕರಾಗಿದ್ದು, ರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನ ಪ್ರಬಂಧಗಳನ್ನು ಮಂಡಿಸಿದ್ದಾರೆ. ಯಕ್ಷಗಾನ, ಸಾಹಿತ್ಯದಲ್ಲಿ ವಿಶೇಷ ಆಸಕ್ತಿ. “ಪೊರೆ ಕಳಚಿದ ಮೇಲೆ', 'ತುಮಕೂರು ಜಿಲ್ಲೆಯ ...
READ MORE