‘ಮಹಾ ಯೋಗಿನಿ’ ಕಾದಂಬರಿಯು ಸುರೇಶ್ ಸೋಮಪುರ ಅವರ ಮೂಲ ಹಿಂದಿ ಕೃತಿಯಾಗಿದ್ದು, ಡಾ. ಎಂ. ವಿ. ನಾಗರಾಜರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇದೊಂದು ರೋಚಕ ಕತೆ. ಕೇವಲ ರೋಚಕ ಕತೆ ಮಾತ್ರವಲ್ಲ ಸತ್ಯ ಕತೆ. ಲೇಖಕ ಸುರೇಶ ಸೋಮಪುರ ಸ್ವತಃ ಕರ್ಣ-ಪಿಶಾಚಿನಿಯನ್ನು ಸಾಕ್ಷಾತ್ಕಾರ ಮಾಡಿಕೊಳ್ಳಲು ಮನೆ-ಮಠ, ಹೆಂಡತಿ-ಮಕ್ಕಳು, ಬಂಧುಗಳು ಎಲ್ಲರನ್ನೂ ಬಿಟ್ಟು ದೀದಿ ಅಂಬಿಕಾದೇವಿಯ ಸಹಾಯದಿಂದ ಶ್ರೀ ಚೈತನ್ಯಾನಂದರನ್ನು ಭೇಟಿಯಾಗುತ್ತಾರೆ. ಅವರ ಮಾರ್ಗದರ್ಶನದಲ್ಲಿ ತಂತ್ರ-ಮಂತ್ರ, ಶವಸಾಧನೆ ಇತ್ಯಾದಿ ನಡೆಸುತ್ತಾರೆ. ಅಂತಿಮವಾಗಿ 'ಕರ್ಣ-ಪಿಶಾಚಿನಿ' ಅವರ ವಶವಾಗುತ್ತದೆ. ಸುರೇಶ್ ಸೋಮಪುರ ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಚಮತ್ಕಾರಗಳನ್ನು ಮಾನವ ಕಲ್ಯಾಣಕ್ಕಾಗಿ ಪ್ರಯೋಗಿಸಲು ನಿರ್ಧರಿಸುತ್ತಾರೆ. ಮನುಷ್ಯ ಜೀವನವನ್ನು ಹೇಗೆ ಕಳೆಯ ಬೇಕೆಂದು ಪ್ರತಿಪಾದಿಸುತ್ತಾರೆ. ಆತ್ಮ-ಪರಮಾತ್ಮ, ಭೂತ-ಪ್ರೇತ, ಧರ್ಮ-ಅಧರ್ಮಗಳಿಗೆ ಹೆದರಿ ಬದುಕುವುದು ಸರಿಯಲ್ಲ ಎನ್ನುತ್ತಾರೆ. ಅಂಧಶ್ರದ್ಧೆಯಿಂದ ಮನುಷ್ಯ ಹೊರಬರಬೇಕಿದೆ, ಬದುಕಲು ಹೊಸ ಮಾರ್ಗವನ್ನು ಕಂಡುಕೊಳ್ಳಲು ಇಲ್ಲಿಯ ಸತ್ಯಕತೆ ಪ್ರೇರಣೆ ನೀಡುತ್ತದೆ. ಈ ಎಲ್ಲಾ ರೋಚಕ ಅನುಭವವನ್ನು ಕತೆ ರೊಪದಲ್ಲಿ ಬರೆದು ಮಹಾ ಯೋಗಿನಿ ಕಾದಂಬರಿ ಮೂಲಕ ಜನರಿಗೆ ತಲುಪಿಸಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು 242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ. ಅನುವಾದಿತ ಕೃತಿಗಳು : ಜೇಮ್ಸ್ ಹ್ಯಾಡ್ಲಿ ...
READ MORE