‘ಮಹಾರಾಷ್ಟ್ರ ಕರ್ನಾಟಕ ಆದಾನ ಪ್ರದಾನ’ ಕೃತಿಯ ಲೇಖಕ ಜಿ.ಎನ್. ಉಪಾಧ್ಯ ರಚಿಸಿರುವ ಕೃತಿ. ಈ ಕೃತಿಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಆಚರಣೆಗಳು,ಬದುಕಿನ ಶೈಲಿ ಜೊತೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕ್ಕೆ ಇರುವ ಸಂಬಂಧಗಳ ಬಗ್ಗೆ ವಿವರಿಸಿದ್ದಾರೆ. ಇಲ್ಲಿ ಮಹಾರಾಷ್ಟ್ರ- ಕರ್ನಾಟಕ ಆದಾನ ಪ್ರದಾನ, ಶರಣ ಕ್ರಾಂತಿಗೆ ನಾಂದಿ ಹಾಡಿದ ಮಂಗಳವಾಡ, ಸೊಲ್ಲಾಪುರ ಜಿಲ್ಲೆಯ ಸ್ಥಳನಾಮಗಳು ಒಂದು ಅಧ್ಯಯನ, ಮಹಾರಾಷ್ಟ್ರದ ಕನ್ನಡ ಶಾಸನಗಳ ಸಾಂಸ್ಕೃತಿಕ ಮಹತ್ವ, ಅನುಬಂಧಗಳು ಮತ್ತು ಸಿದ್ಧರಾಮನ ಸೊನ್ನಲಿಗೆ ಎಂಬ ಲೇಖನಗಳು ಸಂಕಲನಗೊಂಡಿವೆ.
ಜಿ.ಎನ್. ಉಪಾಧ್ಯ ಮೂಲತಃ ಉಡುಪಿ ತಾಲೂಕಿನ ಕೋಟದವರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕ ಪದವಿ ಪಡೆದ ಅವರು ಮುಂಬೈ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಯನ್ನು ವರದರಾಜ ಆದ್ಯ ಬಂಗಾರದ ಪದಕ ಹಾಗೂ ಮೊದಲ ರ್‍ಯಾಂಕ್ನೊಂದಿಗೆ ಗಳಿಸಿಕೊಂಡರು. ಮಹಾರಾಷ್ಟ್ರದ ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ ಎಂಬ ಮಹಾಪ್ರಬಂಧ ರಚಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಸಾಂಸ್ಕೃತಿಕ ಅಧ್ಯಯನ, ವಿಮರ್ಶೆ, ಭಾಷಾ ವಿಜ್ಞಾನ ಮತ್ತು ಪತ್ರಿಕೋದ್ಯಮ ಅವರ ಆಸಕ್ತಿಯ ಕ್ಷೇತ್ರಗಳು. 'ಕರ್ನಾಟಕ ಮಲ್ಲ’ ಪತ್ರಿಕೆಯಲ್ಲಿ ಅವರು ಕೆಲವು ವರ್ಷ ಉಪಸಂಪಾದಕರಾಗಿ ಕೆಲಸ ಮಾಡಿದ್ದರು. ಸೊಲ್ಲಾಪುರ ಒಂದು ಸಾಂಸ್ಕೃತಿಕ ಅಧ್ಯಯನ, ಮಹಾರಾಷ್ಟ್ರದ ಕನ್ನಡ ಶಾಸನಗಳ ...
READ MORE