ಲಕ್ಷ್ಮಣ ಕೌಂಟೆ ಅವರ ಐತಿಹಾಸಿಕ ಕಾದಂಬರಿ ‘ಮಹಾಜಂಗಮ’. ಅಲ್ಲಮಪ್ರಭುವಿನ ಜೀವನಯಾನ, ನೇರ ನಿಷ್ಠುರವಾದಿತನ, ಅನೇಕ ಶಿವಶರಣ- ಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದ, ತನ್ನ ವಚನಗಳ ಮೂಲಕ ಅಂತರಂಗ, ಬಹಿರಂಗಗಳನ್ನು ಇಲ್ಲಿ ಲೇಖಕರು ಶೋಧಿಸಲೆತ್ನಿಸಿದ್ದಾರೆ.
ಕಾದಂಬರಿಕಾರ ಲಕ್ಷ್ಮಣ ಕೌಂಟೆಯವರು 1958 ಡಿಸೆಂಬರ್ 10 ರಂದು ಜನಿಸಿದರು. ಮೂಲತಃ ಗುಲಬರ್ಗದವರು. ರಂಗಭೂಮಿ ಅವರ ಅಭಿರುಚಿಯ ಕ್ಷೇತ್ರ. ಓದು, ಸಾಹಿತ್ಯ ರಚನೆ, ನಾಟಕ ಅವರ ಒಲವಿನ ಪ್ರವೃತ್ತಿ. ಅವರು ಬರೆದ ನಾಟಕ 'ಕಲೆಯ ಕೊಲೆ ಅರ್ಥಾತ್ ಕಲಾವಿದನ ಕಣ್ಣೀರು' ರಂಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಲೀಲಾತರಂಗ, ಸಂಚಲನ, ಅನುಪರ್ವ, ಸಮರ್ಪಿತ ಮುಂತಾದ ಕಾದಂಬರಿಗಳನ್ನು ರಚಿಸಿದ್ದಾರೆ. ...
READ MORE