ಇಂಗ್ಲೆಂಡ್ ನಲ್ಲಿ ಹುಟ್ಟಿ, ಇಂಗ್ಲಿಷಿನಲ್ಲಿ ವಿದ್ಯಾಭ್ಯಾಸ ಪಡೆದು ಎಳೆತನದಿಂದಲೇ ಅಲ್ಲಿಯ ಆಚಾರ-ವಿಚಾರಗಳ ಆವರಣದೊಳಗೆ ಬೆಳೆದಿದ್ದರೂ ಭಾರತದ ಪ್ರಾಚೀನ ಸಾಹಿತ್ಯ-ಪುರಾಣ-ಸಂಸ್ಕೃತಿಯತ್ತ ವಾಲಿದ್ದು ಅರವಿಂದರ ಜೀವನವೇ ಒಂದು ನಿಗೂಢ. ಈ ಕೃತಿಯಲ್ಲಿ ಅರವಿಂದರ ವಂಶವೃತ್ತ, ಪೂರ್ವಾಶ್ರಮ, ಅಧ್ಯಯನ, ದೇಶಸೇವೆ, ಯೋಗಸಾಧನೆ, ಮತಗಳು ಹೀಗೆ ವಿವಿಧ ಅಧ್ಯಾಯಗಳ ಮೂಲಕ ಅರವಿಂದರ ಅಗಾಧ ವ್ಯಕ್ತಿತ್ವವನ್ನು ಇಲ್ಲಿ ಕಟ್ಟಿಕೊಡಲಾಗಿದೆ.
ಕನ್ನಡ ಭಾಷೆ, ಕರ್ನಾಟಕ ಇತಿಹಾಸ ಹಾಗೂ ಭಾರತೀಯ ಸಂಸ್ಕೃತಿಯ ಸಂಶೋಧಕರಾದ ಶಂ.ಬಾ. ಜೋಶಿ ಅವರು ಕನ್ನಡ ಸಂಶೋಧನಾ ಕ್ಷೇತ್ರದ ಬಲುದೊಡ್ಡ ಹೆಸರು. 1896ರ ಜನೇವರಿ 4ರಂದು ಗುರ್ಲಹೊಸೂರಿನಲ್ಲಿ ಜನಿಸಿದರು. ತಂದೆ ಬಾಳದೀಕ್ಷಿತ ಜೋಶಿ ಮತ್ತು ತಾಯಿ ಉಮಾಬಾಯಿ. ವಿದ್ಯಾಭ್ಯಾಸ ಗುರ್ಲಹೊಸೂರು, ಬೊಮ್ಮನಹಳ್ಳಿ, ಪುಣೆ ಹಾಗೂ ಧಾರವಾಡಗಳಲ್ಲಿ ಆಯಿತು. 1916ರಲ್ಲಿ ಧಾರವಾಡದ ಸರ್ಕಾರಿ ತರಬೇತಿ ಕಾಲೇಜು ಸೇರಿ ಶಿಕ್ಷಣ ತರಬೇತಿ ಪಡೆದರು. ಚಿಕ್ಕೋಡಿಯಲ್ಲಿ ಶಾಲಾ ಶಿಕ್ಷಕರಾಗಿ (1926-27) ಸೇವೆ ಸಲ್ಲಿಸಿದ ಮೇಲೆ 1928ರಲ್ಲಿ ವಿಕ್ಟೋರಿಯಾ ಹೈಸ್ಕೂಲಿನಲ್ಲಿ ಶಿಕ್ಷಕರಾಗಿ ಸೇರಿದ ಅವರು 1946ರ ವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕರ್ನಾಟಕ ...
READ MORE