ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಮಹಿಳಾ ಸಬಲೀಕರಣ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.45.5 ರಷ್ಟು ಜನ ಮಹಿಳೆಯರಿದ್ದಾರೆ. ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳ ಪಾಲು ಶೇ. 9 ಮಾತ್ರ. ನೌಕರರ ವರ್ಗದಲ್ಲಿ ಶೇ. 24 ರಷ್ಟು ಮಾತ್ರ. ಪಿಯುಸಿ ನಂತರದ ಶಿಕ್ಷಣದಲ್ಲಿ ಶೇ. 27 ರಷ್ಟು ಮಾತ್ರ. ಒಟ್ಟಾರೆ ಈ ಅಂಕಿ-ಅಂಶಗಳು ಮಹಿಳೆಯರು ಮುಖ್ಯವಾಹಿನಿಯಿಂದ ದೂರವೇ ಉಳಿದಿದ್ದಾರೆ ಎನ್ನುವುದು ಸ್ಪಷ್ಟ. ಭಾರತದಲ್ಲಿ ಮಹಿಳೆಯರ ಶಿಕ್ಷಣ, ಸ್ಥಾನಮಾನಕ್ಕಾಗಿ ಹತ್ತು ಹಲವು ಸಮಾಜ ಸುಧಾರಕರು ಹೋರಾಡಿದ್ದಾರೆ. ಆದರೂ, ಪುರುಷರೊಂದಿಗೆ ಸಕಲ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಮಹಿಳೆಯರಿಗೆ ಸಾಧ್ಯವಾಗಿಲ್ಲ. ಆದ್ದರಿಂದ, ಹೋರಾಟದ ತೀವ್ರತೆ ಹೆಚ್ಚುಬೇಕು ಎಂಬ ಅಭಿಪ್ರಾಯದ ಲೇಖನಗಳು ಈ ಕೃತಿಯಲ್ಲಿ ಒಳಗೊಂಡಿವೆ.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE