ಮಕ್ಕಳು ಬೇಕೆ ಮಕ್ಕಳು ಮಾಧ್ಯಮ ಕ್ಷೇತ್ರದ ಅನುಭವಗಳ ಗುಚ್ಛ. ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ವೇಳೆ ಆದ ಅನುಭವಗಳು, ಕಂಡುಂಡ ಘಠನೆಗಳು ಲಲಿತ ಪ್ರಬಂಧದ ರೂಪದಲ್ಲಿವೆ.
ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ. ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...
READ MORE