ಕೇರಳದ ಸಂಸ್ಕೃತಿ ಕುರಿತು ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆಯಲ್ಲಿ ಅಧ್ಯಯನಗಳನ್ನು ಪ್ರಕಟಿಸುವ ವಿದ್ವಾಂಸರಲ್ಲಿ ಮೋಹನ ಕುಂಟಾರ್ ಪ್ರಮುಖರು. ಕೇರಳದ ಭಾಷೆ, ಸಾಹಿತ್ಯ, ಸಮಾಜ, ಧರ್ಮ ಮತ್ತು ರಂಗಭೂಮಿಯ ಬಗ್ಗೆ ಈ ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ. ಇಲ್ಲಿ ಒಟ್ಟು 10 ಲೇಖನಗಳಿವೆ. ಕೇರಳದ ವಿಶಿಷ್ಟ ಸಂಸ್ಕೃತಿಯನ್ನು ಈ ಕೃತಿ ನಮಗೆ ಪರಿಚಯಿಸುತ್ತದೆ. ಮಲಯಾಳ ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಅಧ್ಯಯನ ಆಸಕ್ತರಿಗೆ ಈ ಕೃತಿ ಉಪಯುಕ್ತ ಕೃತಿಯಾಗಿದೆ.
ಡಾ. ಎ. ಮೋಹನ್ ಕುಂಟಾರ್ ಅವರು 25-05-1963ರಂದು ಜನಿಸಿದರು. ಬಿ.ಎ, ಎಂ.ಎ, ಎಂ.,ಫಿಲ್ ಪದವೀಧರರು. ಮಲೆಯಾಳಂ ಭಾಷೆಯಲ್ಲಿ ಸರ್ಟಿಫಿಕೆಟ್, ತಮಿಳು ಭಾಷೆಯಲ್ಲಿ ಡಿಪ್ಲೊಮಾ ಹಾಗೂ ತೆಲುಗು ಭಾಷೆಯಲ್ಲಿ ಪಿ.ಎಚ್.ಡಿ. ಪಡೆದಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ. ಭಾಷಾಂತರ, ಸಾಹಿತ್ಯ, ಸಂಸ್ಕೃತಿ, ಮತ್ತು ಯಕ್ಷಗಾನ ಪ್ರಮುಖ ಆಸಕ್ತಿ ಕ್ಷೇತ್ರಗಳು. ಕೇರಳ ಕಥನ, ಸಮುದಾಯಗಳ ಕನ್ನಡ ಪರಂಪರೆ, ಕನ್ನಡ ಮಲೆಯಾಳಂ ಭಾಷಾಂತರ ಪ್ರಕ್ರಿಯೆ ಇವರ ಪ್ರಮುಖ ಪ್ರಕಟಣೆಗಳು. ಕನ್ನಡ ಅನುವಾದ ಸಾಹಿತ್ಯ,”ಸಮುದಾಯಗಳಲ್ಲಿ ಲಿಂಗಸಂಬಂಧಿ ನೆಲೆಗಳು’ ಪ್ರಮುಖ ಸಂಶೋಧನಾ ಲೇಖನಗಳಾಗಿವೆ. ...
READ MORE