ಲೇಖಕ ಗಿರಿಮನೆ ಶ್ಯಾಮರಾವ್ ಅವರ ಕೃತಿ-ಮಲೆನಾಡಿನ ಮರೆಯದ ನೆನಪುಗಳು. ಮಲೆನಾಡಿನ ರೋಚಕ ಕತೆಗಳ ಸರಣಿಯ ಭಾಗ-8. ಮಲೆನಾಡಿನ ಸನ್ನಿವೇಶ, ಘಟನೆಗಳನ್ನು ವಿವರಿಸುತ್ತಲೇ ಅದರ ಹಿಂದಿರುವ ರೋಚಕತೆಯನ್ನು ಬರಹಕ್ಕಿಳಿಸಿದ ಕೃತಿ. ಮಲೆನಾಡು, ಅರೆ ಮಲೆನಾಡು ಹಾಗೂ ಬಯಲು ಸೀಮೆಯ ಪ್ರದೇಶದ ಸ್ಪಷ್ಟ ಮಾಹಿತಿಯ ಅನುಭವವನ್ನು ದರ್ಶಿಸುತ್ತದೆ. ಲೇಖಕರು ಕಾಡಿನ ತಮ್ಮ ಅನುಭವಗಳನ್ನು ವಿವರಿಸಿದ್ದು, ಕಾಡಿನ ದಟ್ಟತೆಯನ್ನು ಓದುಗರ ಅರಿವಿಗೆ ತರುತ್ತಾರೆ.
ಗಿರಿಮನೆ ಶ್ಯಾಮರಾವ್ ಆಧುನಿಕ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ವಿನೂತನ ರೀತಿಯ ಬರವಣೆಗೆಗಳಿಂದ ಕನ್ನಡ ಓದುಗ ಆಸಕ್ತರ ನಡುವೆ ಚಿರಪರಿಚಿತರು. ಇವರ ಹುಟ್ಟೂರು ಹಾಸನ ಜಿಲ್ಲೆಯ ಸಕಲೇಶಪುರದ ಗಾಣದಹೊಳೆ ಗ್ರಾಮ. ಪತ್ನಿ ಶಶಿಕಲಾ ಹಾಗು ಪುತ್ರ ಚೇತನ್ ಶರ್ಮ. ಕೃಷಿಕನಾಗಿ 35 ವಸಂತಗಳ ಸುದೀರ್ಘ ಅನುಭವವಿದೆ. ಪಶ್ಚಿಮ ಘಟ್ಟದ ಪ್ರಕೃತಿ, ಜೀವಜಗತ್ತಿನ ಪರಿಚಯ, ಮನುಷ್ಯರ ಮನಸ್ಸಿನ ಅವಲೋಕನ, ವೈಜ್ಞಾನಿಕವಾದ ವೇದದ ಒಳಗನ್ನು ತಿಳಿಯುವ ಕುತೂಹಲ ಇವೆಲ್ಲವೂ ಇವರನ್ನು ಬರವಣಿಗೆಯ ಕ್ಷೇತ್ರದೆಡೆಗೆ ಸೆಳೆದಿದೆ. ಹವ್ಯಾಸಿ ಪತ್ರಿಕಾ ಅಂಕಣಕಾರರಾಗಿದ್ದಾರೆ. ಮಕ್ಕಳ ಸಾಹಿತ್ಯ, ವ್ಯಕ್ತಿತ್ವ ವಿಕಸನ, ಚಿಂತನೆ, ಕಾದಂಬರಿ ಹೀಗೆ ಹಲವಾರು ...
READ MORE