ಮನಸ್ಸಿಗೇಕೆ ಕಾಯಿಲೆ? ಪರಿಹಾರವೇನು?

Author : ಸಿ.ಆರ್. ಚಂದ್ರಶೇಖರ್

Pages 130

₹ 85.00




Year of Publication: 2014
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ ರಸ್ತೆ. ಗಾಂಧಿನಗರ, ಬೆಂಗಳೂರು, 560009
Phone: 0804011 4455

Synopsys

ಮನಸ್ಸು ಸೂಕ್ಷ್ಮ ವಾಗಿದ್ದು, ಅದರ ಗ್ರಹಿಕೆ, ಚಿಂತನೆಗಳೆಲ್ಲವೂ ವಿಭಿನ್ನ. ಮನಸ್ಸನ್ನು ಅರಿಯುವುದು ಸುಲಭವಲ್ಲ. ಈ ನಿಟ್ಟಿನಲ್ಲಿ ಲೇಖಕ ಸಿ.ಆರ್. ಚಂದ್ರಶೇಖರ ಅವರು ಮನಸ್ಸಿನ ಚಂಚಲತೆ, ವ್ಯಕ್ತಿಯ ವ್ಯಕ್ತಿತ್ವವನ್ನು ಅವಲಂಬಿಸಿ ಅದರ ಚಲನವಲನಗಳನ್ನು ಮನೋವಿಜ್ಞಾನದ ನೆಲೆಯಲ್ಲಿ ಚರ್ಚಿಸಿದ್ದಾರೆ. ಸಿಟ್ಟು, ಸಿಡುಕು, ಆಘಾತ, ಖಿನ್ನತೆ, ನೋವು, ಅಳಗಳ ಕುರಿತು ಮಾಹಿತಿ ಹಾಗೂ ಪರಿಹಾರವನ್ನು ಈ ಕೃತಿಯಲ್ಲಿ ನೀಡಿದ್ದಾರೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books