ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕ ಅವರ ಸಾಮಾಜಿಕ ಕಾದಂಬರಿ ಮಂದಾರ ಮಂದಾಕಿನಿ. ಓದು ಬಲ್ಲವರ ಹೃದಯಗಳನ್ನು ಈ ಕಾದಂಬರಿಗಳು ತಟ್ಟಿದೆ. ಮಂದಾರ ಮಂದಾಕಿನಿ ಕಾದಂಬರಿಯು ಹೆಸರೇ ಹೇಳುವಂತೆ ಮಂದಾರ ಹಾಗೂ ಮಂದಾಕಿನಿ ಎಂಬ ಎರಡು ಪಾತ್ರಗಳ ಸುತ್ತ ಹೆಣೆದಿರುವ ಸುಂದರ ಕಾದಂಬರಿಯಾಗಿದೆ. 2011ರಲ್ಲಿ ಈ ಕೃತಿಯು ನಾಲ್ಕನೇ ಮುದ್ರಣವನ್ನು ಕಂಡಿದೆ.
ಅಗ್ರಶ್ರೇಣಿಯ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕರು ಹುಟ್ಟಿದ್ದು ಬಾಗಲಕೋಟ ಜಿಲ್ಲೆಯ ಬೀಳಗಿಯಲ್ಲಿ.1911 ಸೆಪ್ಟಂಬರ್ 5ರಂದು. 1933ರಿಂದ ಸಾಹಿತ್ಯ ಕೃಷಿ ಆರಂಭಿಸಿದ ಪುರಾಣಿಕರು 1946ರಲ್ಲಿ 'ರಾಮೂನ ಕಥೆಗಳು' ಪ್ರಕಟಿಸಿದರು. ಅವರ 'ಧರ್ಮದೇವತೆ' ಕಾದಂಬರಿ 'ಕರುಣೆಯೇ ಕುಟುಂಬದ ಕಣ್ಣು' ಎಂಬ ಚಲನಚಿತ್ರವಾಗಿದೆ. ಪುರಾಣಿಕರ 11 ಕೃತಿಗಳು ಬೆಳ್ಳೆತೆರೆ ಕಂಡಿವೆ. 'ಸನಾದಿ ಅಪ್ಪಣ್ಣ' ಕನ್ನಡಿಗರೆಂದೂ ಮರೆಯದ ಕೃತಿ. ಮೊದಲ ಪ್ರಕಟಿತ ಗದ್ಯ ಕೃತಿ, 'ರಾಮೂನ ಕಥೆಗಳು'. ಮೊದಲ ಕವನ ಸಂಕಲನ 'ಬಾಳ ಕನಸು'. ಮೊದಲ ಕಾದಂಬರಿ 'ಮುಗಿಲಮಲ್ಲಿಗೆ'. 'ಮೌನಗೌರಿ', 'ಮುತ್ತೈದೆ', `ಮನೆ ತುಂಬಿದ ಹೆಣ್ಣು', 'ಮಣ್ಣಿನ ಮಗಳು', 'ಕುಲವಧು', 'ಮನಸೋತ ಮನದನ್ನೆ', 'ಧರ್ಮ ...
READ MORE