ಮನೋದೈಹಿಕ ಕಾಯಿಲೆಗಳ ರೋಗಿಗಳಿಂದ ಕಲಿತ ಪಾಠಗಳು ಎಂಬ ಉಪಶೀರ್ಷಿಕೆಯಡಿ ಹಿರಿಯ ಲೇಖಕ ರಾಶಿ (ಎಂ.ಶಿವರಾಂ) ಅವರ ಕೃತಿ-ಮನೋನಂದನ. ಮನಸ್ಸು-ದೇಹಕ್ಕೆ ಅನ್ಯೋನ್ಯ ಸಂಬಂಧವಿದೆ. ಒಂದು ಮತ್ತೊಂದರಿಂದ ಬೇರ್ಪಡಿಸಲಾಗದು. ಇವುಗಳಿಗೆ ಮನೋದೈಹಿಕ ಕಾಯಿಲೆಗಳು ಎಂದು ಕರೆಯುತ್ತಾರೆ. ಇಂತಹ ಕಾಯಿಲೆಗಳಿಂದ ಬಳಲುವ ರೋಗಿಗಳಿಂದ ವೈದ್ಯರಾಗಿ ತಾವ ಕಲಿತ ಪಾಠಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದಲೂ ಹಾಗೂ ಅಧ್ಯಯನ ಆಸಕ್ತಿಯಿಂದಲೂ ಲೇಖಕರು ದಾಖಲಿಸಿದ್ದ ಅರ್ಥಪೂರ್ಣ ಪ್ರಸಂಗಗಳು, ಘಟನೆಗಳ ವಿವರಣೆಯ ಕೃತಿ ಇದು.
ಲೇಖಕ ಎಂ.ಶಿವರಾಂ ಅವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಂದೆ- ರಾಮಸ್ವಾಮಯ್ಯ. ತಾಯಿ- ಸೀತಮ್ಮ. ಬೆಂಗಳೂರಿನಲ್ಲಿಯೇ ಶಿಕ್ಷಣ ಪಡೆದ ಅವರು ಎಂ.ಬಿ.ಬಿ.ಎಸ್ ಓದುತ್ತಿರುವಾಗಲೇ ತಂದೆ ತೀರಿಕೊಂಡಿದ್ದರಿಂದ ಸಂಸಾರದ ಜವಾಬ್ದಾರಿ ಹೊರಬೇಕಾಯ್ತು. ಈ ವೇಳೆ ಸಾಹಿತಿ ಕೈಲಾಸಂ ಅವರು ವೈದ್ಯರಾಗಿ ಸೇವೆಸಲ್ಲಿಸುವಂತೆ ಸಲಹೆ ನೀಡಿದ್ದರು. ಈ ಕಾರಣದಿಂದಾಗಿಯೇ ಬೆಂಗಳೂರು ಮೆಡಿಕಲ್ ಕಾಲೇಜು ಸ್ಥಾಪಿಸಿದ ಶಿವರಾಂ ಅವರು ಕೈಗಾರಿಕೋದ್ಯಮದಲ್ಲೂ ಸೇವೆ ಸಲ್ಲಿಸಿದ್ದಾರೆ. ಅನೇಕ ಸಂಘ ಸಂಸ್ಥೆಗಳೊಡನಾಟವಿದ್ದ ಅವರು ಇಂಡಸ್ಟ್ರಿಯಲ್ ಟೆಸ್ಟಿಂಗ್ ಲ್ಯಾಬೋರೇಟರಿಯ ನಿರ್ದೇಶಕರಾಗಿ, ಕಿರ್ಲೋಸ್ಕರ್ ಕಾರ್ಖಾನೆಯ ನಿರ್ದೇಶಕರಾಗಿ, ಮೈಸೂರು ಲ್ಯಾಂಪ್ಸ್, ಇಂಡಿಯನ್ ಆಕ್ಸಿಜನ್ ಕಂಪನಿಗಳ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೈಸೂರು ಕ್ಯಾನ್ಸರ್ ಸೊಸೈಟಿ ...
READ MORE