ಅಮೆರಿಕಾದ ಕಪ್ಪು ಜನರಿಗೆ ಸಮಾನ ನಾಗರಿಕ ಹಕ್ಕುಗಳಿಗಾಗಿ ಚಳವಳಿ ಸಂಘಟಿಸಿದವರು ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್. ಅಮೆರಿಕಾದಲ್ಲಿ ಬೇರೂರಿದ್ದ ವರ್ಣಭೇದದ ವಿರುದ್ದ ಹೋರಾಟ ನಡೆಸಿದ್ದ ಮಾರ್ಟಿನ್ ಅವರನ್ನು ಈ ಕೃತಿ ಪರಿಚಯಿಸುತ್ತದೆ. ಅವರ ಬಾಲ್ಯ- ಬದುಕು-ಹೋರಾಟದ ದಾರಿಯನ್ನು ಲೇಖಕ ಮುರಳೀಧರನ್ ವೈ. ಜಿ. ಸರಳವಾಗಿ ನೀಡಿದ್ದು ಸಾಹಿತಿ ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ವೈ.ಜಿ.ಮುರಳೀಧರನ್ ಅವರು [1956] ಬಿ ಕಾಂ ಪದವೀಧರರು ಮತ್ತು ಪತ್ರಿಕೋದ್ಯಮದಲ್ಲಿ ಪಿಜಿ ಡಿಪ್ಲೋಮ ಪಡೆದಿದ್ದಾರೆ. ಬಿ ಎಚ್ ಇ ಎಲ್ ಕಾರ್ಖಾನೆಯಲ್ಲಿ 20 ವರ್ಷ ಹಣಕಾಸು ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ನಂತರ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಲ್ಲಿ 12 ವರ್ಷ ಗ್ರಾಹಕ ವ್ಯವಹಾರಗಳ ಕಚೇರಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. 1993ರಿಂದ ಗ್ರಾಹಕ ಹಕ್ಕುಗಳು, ಮಾಹಿತಿ ಹಕ್ಕು ಇತ್ಯಾದಿ ಸಾಮಾಜಿಕ ವಿಷಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಕೇಂದ್ರ ಸರಕಾರದ ವಿವಿಧ ಸಲಹಾ ಮಂಡಳಿಯ ಸದಸ್ಯರಾಗಿ ನಾಗರಿಕರನ್ನು ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದ ಆಡಳಿತ ತರಬೇತಿ ಸಂಸ್ಥೆ, ನ್ಯಾಷನಲ್ ಲಾ ಸ್ಕೂಲ್ ...
READ MORE