ಮಾರ್ಕ್ಸ್‌ವಾದಿ ಪರಿಕಲ್ಪನೆಗಳು

Author : ಕೆ. ಕೇಶವ ಶರ್ಮ

Pages 482

₹ 350.00




Year of Publication: 2013
Published by: ದೇಸೀ ಪುಸ್ತಕ
Address: ನಂ. 121, 13 ನೇ ಮುಖ್ಯರಸ್ತೆ, ಎಂ. ಸಿ. ಲೇಜೌಟ್, ವಿಜಯನಗರ, ಬೆಂಗಳೂರು 560040
Phone: 9845096668

Synopsys

ಮಾರ್ಕ್ಸ್ವಾದ ಒಂದು ಸಮಗ್ರ ವಿಶ್ವದೃಷ್ಟಿ. 19 ನೇಯ ಶತಮಾನದ ಮೂರು ಪ್ರಧಾನ ಸೈದ್ಧಾಂತಿಕ ವಿಚಾರಧಾರೆಗಳಾದ ಜರ್ಮನಿಯ ತತ್ವಶಾಸ್ತ್ರ, ಇಂಗ್ಲೆಂಡಿನ ರಾಜಕೀಯ ಅರ್ಥಶಾಸ್ತ್ರ ಮತ್ತು ಫ್ರಾನ್ಸಿನ ಸಮಾಜವಾದಿ  ಚಿಂತನೆ ಇದನ್ನು ಮಾಕ್ರ್ಸ್ ಗಾಢವಾಗಿ ಅಭ್ಯಾಸ ಮಾಡಿ ಮತ್ತು ವಿಮರ್ಶಿಸಿ ಇವುಗಳ ಆಧಾರದ ಮೇಲೆ ತನ್ನ ಸಿದ್ಧಾಂತವನ್ನು ರಚಿಸಿದ. ವರ್ಗ ಹೋರಾಟದ ಅನುಭವವನ್ನೆಲ್ಲ ಒಂದುಗೂಡಿಸಿ ಅದರ ಆಧಾರದ ಮೇಲೆ ಹೊಸ ಸಮಾಜದ ರೂಪುರೇಷೆಗಳನ್ನು ನಿರೂಪಿಸಿದ.

ಈ ದೃಷ್ಟಿಯಿಂದ ಆಧುನಿಕ ಯುಗದಲ್ಲಿ ಮಾರ್ಕ್ಸ್‌ವಾದಕ್ಕೆ ಮತ್ತು ಮಾರ್ಕ್ಸ್‌ವಾದಿ ವಿಮರ್ಶೆಗೆ ಅದರದ್ದೇ ಆದ ಪ್ರಸ್ತುತತೆಯಿದೆ. ಮಾರ್ಕ್ಸ್‌ವಾದದಲ್ಲಿ ಏನಿದ್ದರೂ ಆರ್ಥಿಕ ಪ್ರಶ್ನೆಗಳು  ಮುಖ್ಯ. ಅದು ಉತ್ಪಾದನೆಗಳ ಸಂಬಂಧಗಳ ಕುರಿತು ಮಾತ್ರ ಮಾತಾಡುತ್ತದೆ.

ಮಾರ್ಕ್ಸ್‌ವಾದದಲ್ಲಿ ಮೇಲುವರ್ಗ, ಬಂಡವಾಳವಾದ, ಈ ತರಹದ ಪದಗಳು ಮಾತ್ರವೇ ಮುಖ್ಯವಾಗಿದೆ. ಹೀಗಾಗಿ ಮಾರ್ಕ್ಸ್‌ವಾದದ ಹಿನ್ನೆಲೆಯಲ್ಲಿ ಲೇಖಕ ಕೇಶವಶರ್ಮ ಕೆ.  ಅವರು ಪ್ರಸ್ತಾಪಿಸಿರುವ ಆಧುನಿಕತಾವಾದ ಮತ್ತು  ಮಾರ್ಕ್ಸ್‌ವಾದ, ಉದಾರವಾದಿ ಮಾನವತಾವಾದ ಮತ್ತು ಮಾರ್ಕ್ಸ್‌ವಾದಿ ವಿಮರ್ಶೆ,  ನಿರಚನವಾದ, ಬಂಡವಾಳಶಾಹಿ ಉತ್ಪಾದನೆ ಮತ್ತು ಪುರುಷಕೇಂದ್ರಿತ ಚಿಂತನೆ, ವಿಭಿನ್ನ ದೃಷ್ಟಿಕೋನಗಳನ್ನು ಚರ್ಚಿಸುವ ಕೃತಿ ’ಮಾರ್ಕ್ಸ್‌ವಾದಿ ಪರಿಕಲ್ಪನೆಗಳು’.

About the Author

ಕೆ. ಕೇಶವ ಶರ್ಮ

ಲೇಖಕ ಕೇಶವ ಶರ್ಮ ಕೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕದ ಹತ್ತಿರವಿರುವ ಕೋಡಂದೂರಿನವರು. ತಂದೆ ದಿವಂಗತ ಕೆ.ಕೆ. ನರಸಿಂಹಭಟ್ಟ, ತಾಯಿ ಕೆ.ಎನ್.ಸೀತಾ. ಲೇಖಕಿ ಸಬಿತಾ ಬನ್ನಾಡಿ ಕೇಶವ ಶರ್ಮ ಅವರ ಬಾಳ ಸಂಗಾತಿ. ಯಕ್ಷಗಾನದತ್ತ ಒಲವಿದ್ದ ಕೇಶವ ಶರ್ಮ ಅವರು ಹವ್ಯಾಸಿ ಯಕ್ಷಗಾನದ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಶಾಂತಿನಗರದಲ್ಲಿ ನೆಲೆಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೇಶವ ಶರ್ಮ ಅವರು ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಹೆಣ್ಣಿನ ಪರಿಕಲ್ಪನೆ ವಿಷಯದಡಿ ಪಿಎಚ್.ಡಿ ...

READ MORE

Related Books