ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರು ಬರೆದ ಕೃತಿ-ಮತಾಂತರ ಮತ್ತು ಇತರ ಲೇಖನಗಳು. ಮತಾಂತರ ಹಾಗೂ ಮರು ಮತಾಂತರ-ಈ ಪ್ರಕ್ರಿಯೆಗಳು ಹೊಸದಲ್ಲ. ಯಾವುದೇ ಧರ್ಮ ಸ್ವೀಕರಿಸುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕು. ಅದನ್ನು ವಿರೋಧಿಸುವುದು ಸಂವಿಧಾನ ವಿರೋಧಿ ನಡೆ. ಹಿಂದೂ ಧರ್ಮವನ್ನು ತ್ಯಜಿಸಿ ಇತರೆ ಧರ್ಮೀಯರು ಮುಸ್ಲಿಂ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಈ ಪ್ತಕ್ರಿಯೆಯನ್ನು ಹಿಂದೂವಾದಿಗಳು ವಿರೋಧಿಸುತ್ತಿದ್ದಾರೆ. ಆದರೆ, ಮತಾಂತರ ಅನಿವಾರ್ಯವೆ? ಮತಾಂತರವಾಗುತ್ತಿರುವುದಕ್ಕೆ ಕಾರಣಗಳೇನು? ಹಿಂದು ಧರ್ಮಕ್ಕೆ ಮತಾಂತರಗೊಳ್ಳುತ್ತಿಲ್ಲವೇಕೆ? ಕೇವಲ ಧರ್ಮೀಯ ಕಾರಣಗಳನ್ನು ನೀಡುವುದು ಎಷ್ಟು ಸಮಂಜಸ? ಸಾಮಾಜಿಕ ಕಾರಣಗಳು ಇಲ್ಲವೆ? ಇತ್ಯಾದಿ ಅಂಶಗಳ ಹಿನ್ನೆಲೆಯಲ್ಲಿ ಲೇಖಕರು ಬರೆದ ತೀಕ್ಷ್ಣ ವೈಚಾರಿಕತೆಯ ಬರೆಹಗಳ ಸಂಗ್ರಹ ಕೃತಿ ಇದು.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE