ಇದು 66 ವಿಜ್ಞಾನ ಲೇಖನಗಳ ಸಂಗ್ರಹ. ಬರ್ಮುಡ ಟ್ರೈಯಾಂಗಲ್ ನಿಂದ ತೊಡಗಿತೆ ಅಂತರಿಕ್ಷದ ಜಂಕ್ ವರೆಗೆ-ಡೈನೊಸಾರ್ ಲದ್ದಿಯಿಂದ ತೊಡಗಿ,ಯುದ್ಧಭೂಮಿಯ ರೊಬಾಟ್ ವರೆಗೆ ಕುತೂಹಲ ಉಳಿಸಿಕೊಳ್ಳುತ್ತವೆ. ತಾಂತ್ರಿಕ ಪದಗಳ ಭಾರವಿಲ್ಲ.ಯಾವ ಪುಟ ತೆರೆದರೂ ನಿಮ್ಮದುರಿಗೆ ಸಮಕಾಲೀನ ಸಂಗತಿಗಳು ಬಿಚ್ಚಿಕೊಳ್ಳುವುದು ಈ ಕೃತಿಯ ವೈಶಿಷ್ಟ್ಯ.
ಭೂ ವಿಜ್ಞಾನಿ, ಸಂಶೋಧಕ, ಅಂಕಣಕಾರ, ವಿಜ್ಞಾನ ಲೇಖಕ ಟಿ.ಆರ್. ಅನಂತರಾಮು ಅವರು ಜನಿಸಿದ್ದು 1949 ಆಗಸ್ಟ್ 3ರಂದು ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ತಾಳಗುಂದದಲ್ಲಿ.ತಾಳಗುಂದ ರಾಮಣ್ಣ ಅನಂತರಾಮು ಅವರ ಪೂರ್ಣ ಹೆಸರು. ಸಿರಾದ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಮಾಧ್ಯಮಿಕ ಶಿಕ್ಷಣ ಪೂರ್ಣಗೊಳಿಸಿದ ಅವರು ಸಿರಾದ ಮುನಿಸಿಪಲ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ್ದಾರೆ. ಆನಂತರ ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪದವಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎನ್ಸಿ(ಜಿಯಾಲಜಿ) ಪದವಿ ಪಡೆದಿದ್ದಾರೆ. ಭೂ ವಿಜ್ಞಾನ ವಿಷಯದಲ್ಲಿ ಪದವಿ ಪಡೆದ ನಂತನ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ರಾಜ್ಯದ ನಾನಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ...
READ MORE