ಶಸ್ತ್ರಭ್ಯಾಸದಲ್ಲಿ, ಅರ್ಜುನನಷ್ಟೇ ಕೌಶಲ್ಯ ಹೊಂದಿದ್ದ ಏಕಲವ್ಯನ ಕುರಿತಾತ ನಾಟಕ ಇದಾಗಿದ್ದು ಹೊಸ ರೂಪಿನಿಂದ ಎದ್ದು ಬರುವ ಏಕಲವ್ಯನನ್ನು ಈ ನಾಟಕದಲ್ಲಿ ಕಾಣಬಹುದಾಗಿದೆ.ಲೇಖಕ ಸತ್ಯಾನಂದ ಪಾತ್ರೋಟ.
ಸತ್ಯಾನಂದ ಪಾತ್ರೋಟ ಅವರು ಕನ್ನಡದ ಹೊಸ ಸಂವೇದನೆಯ ಕವಿ, ಲೇಖಕರು. ‘ಪುಟ್ಟ ಗುಡಿಸಲಿನಲ್ಲಿ ಕೆಟ್ಟ ಕನಸುಗಳಿಲ್ಲ..ಮನಸು-ಕನಸುಗಳಲ್ಲಿ ಜಾಜಿ ಮಲ್ಲಿಗೆ..ಎನ್ನುವ ಮೂಲಕ ನಾಡಿನಾದ್ಯಂತ ಜಾಜಿ ಮಲ್ಲಿಗೆ ಕವಿ ಎಂದೇ ಖ್ಯಾತರಾದವರು. ಕೃಷ್ಣಾ ನದಿ ತೀರದ ಸತ್ಯಾನಂದ ಪಾತ್ರೋಟ ದಲಿತ ಲೋಕದ ಬಂಡಾಯ ಪ್ರತಿಭೆ. ಇವರು ಬಾಗಲಕೋಟೆಯಲ್ಲಿ ನಡೆದ ಅಖಿಲ ಭಾರತ ಆರನೇ ದಲಿತ ಸಾಹಿತ್ಯ ಸಮ್ಮೇನಳದ ಅಧ್ಯಕ್ಷತೆ ವಹಿಸಿದ್ದರು. ಕವಿ ಸತ್ಯಾನಂದ ಪಾತ್ರೋಟ ಅವರ ಲೇಖನಿಯಿಂದ ಸೃಜಿಸಿದ ಕವನಗಳು ನಾಡಿನ ಶಾಲಾ ಕಾಲೇಜಿನಿಂದ ಆರಂಭಗೊಂಡು ವಿಶ್ವವಿದ್ಯಾಲಯದ ಪಠ್ಯಗಳಲ್ಲೂ ಸ್ಥಾನ ಪಡೆದಿವೆ. ಧಾರವಾಡದ ಕರ್ನಾಟಕ ವಿ.ವಿ.ಗುಲ್ಬರ್ಗ, ಮಂಗಳೂರು, ತುಮಕೂರು, ಬೆಳಗಾವಿ ರಾಣಿ ...
READ MORE