ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಥಾ ಸಂಕಲನ-ಮತ್ತೊಬ್ಬನ ಸಂಸಾರ. ವಾಸ್ತವತೆ-ಸಾಧ್ಯತೆಗಳ ಶೋಧವನ್ನು ಇಲ್ಲಿಯ ಕಥೆಗಳು ವಸ್ತುವಾಗಿಸಿಕೊಂಡಿವೆ. ಜಾಗತೀಕರಣದಿಂದ ಸಂಭವಿಸಬಹುದಾದ ಅನಾಹುತಗಳಿಗೆ ಸೂಚಕವಾಗಬಹುದು. ಕಾಲಸಂಶ್ಲೇಷಣೆ ಮತ್ತು ಸ್ಮೃತಿಸಂಶ್ಲೇಷಣೆಗಳನ್ನು ಸೂಚಿಸುವುದು ಈ ಕಥೆಗಳ ಆಶಯವಿದ್ದೀತೆ? ಇಂತಹ ಹಲವು ತಾತ್ವಿಕ ಪ್ರಶ್ನೆಗಳಿಗೆ ಉತ್ತರಗಳನ್ನು ಶೋಧಿಸುವ ತೀವ್ರತೆ ಕಥೆಗಳಲ್ಲಿದೆ.
ವಿವೇಕ ಶಾನಭಾಗ ಅವರು ಉತ್ತರ ಕನ್ನಡ ಜಿಲ್ಲೆಯವರು. ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರಾದ ವಿವೇಕ ಅವರು 'ದೇಶಕಾಲ' ಎಂಬ ಸಾಹಿತ್ಯಕ ಪತ್ರಿಕೆಯನ್ನೂ ಏಳು ವರ್ಷ ಕಾಲ ನಡೆಸಿದರು. ಹೊಸ ಬಗೆಯ ಕಥೆ ಕಟ್ಟುವ ಅವರು ಸಣ್ಣ ಊರು ಅಥವಾ ವಿಶಾಲ ಜಗತ್ತುಗಳೆರಡರಲ್ಲಿಯೂ ಮನುಷ್ಯರ ಮನಸ್ಸಿನ ಆಯಾಮ ಗುರುತಿಸಬಲ್ಲರು. ಅವರ ’ಘಾಚರ್ ಘೋಚರ್ ನೀಳ್ಗತೆಯ ಇಂಗ್ಲಿಷ್ ಅನುವಾದ ಜಗತ್ತಿನ ಸಾಹಿತ್ಯ ವಲಯದ ಗಮನ ಸೆಳೆದಿದೆ. ಲಂಡನ್, ಅಮೆರಿಕಗಳಲ್ಲಿ ಪ್ರತ್ಯೇಕ ಆವೃತ್ತಿ ಕಂಡಿರುವ ಈ ಕೃತಿ ಜಗತ್ತಿನ 18 ಭಾಷೆಗಳಿಗೆ ಅನುವಾದಗೊಂಡು ಮಚ್ಚುಗೆ ಗಳಿಸಿದೆ. ಅಂಕುರ, ಲಂಗರು, ಹುಲಿಸವಾರಿ, ಮತ್ತೊಬ್ಬನ ...
READ MORE