‘ಮಾತು ಮಂತ್ರವಾಗುವವರೆಗೆ’ ಕೃತಿಯು ಎಚ್.ಎಸ್. ಶಿವಪ್ರಕಾಶ್ ಅವರ ಕವನಸಂಕಲನವಾಗಿದೆ. ಇಲ್ಲಿನ ಕವಿತೆಗಳು ನಾಟಕೀಯತೆಯಿಂದ ಕೂಡಿದೆ. ಹೆಚ್ಚು ಪ್ರಾರ್ಥನೆಗಳನ್ನು ಕ್ರಿಯಾ ರೂಪಗಳನ್ನು ಒಳಗೊಂಡಿರುವ ಈ ಕವನ ಸಂಕಲನವು ತನ್ನನ್ನು ತಾನು ಅರಿಯುವ ಹಂತದಲ್ಲಿದೆ. ಇಲ್ಲಿನ ಕವಿತೆಗಳಿಗೆ ಒಂದು ರೀತಿಯ ಕುದಿತವಿದ್ದು, ಬಹುತೇಕ ಕವಿತೆಗಳು ಉರಿಯುವ ಆತ್ಮದಂತಿದೆ ಎಂದು ಕವಿ ತಿಳಿಸಿದ್ದಾರೆ.
ಕವಿ, ಸಾಹಿತಿ, ಲೇಖಕ ಎಚ್.ಎಸ್.ಶಿವಪ್ರಕಾಶ್ ಬೆಂಗಳೂರಿನಲ್ಲಿ 15-06-1954ರಂದು ಜನಿಸಿದರು. ತಂದೆ ಪ್ರಸಿದ್ಧ ಸಾಹಿತಿಗಳು ಮತ್ತು ಕನ್ನಡ ಪರಿಷತ್ತಿನ ಅಧ್ಯಕ್ಷರು ಆಗಿದ್ದ ಶಿವಮೂರ್ತಿ ಶಾಸ್ತ್ರಿಗಳು. ನವದೆಹಲಿಯ ಜೆ.ಎನ್.ಯು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಈಸ್ತೆಟಿಕ್ಸ್ನಲ್ಲಿ ಪ್ರೋಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾವ್ಯ, ನಾಟಕ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಶಿವಪ್ರಕಾಶರು ತಮ್ಮ ನಾಟಕ ಮಹಾಚೈತ್ರೆ ರಚನೆಯಿಂದಾಗಿ ಸಾರ್ವಜನಿಕ ವಿರೋಧ ಎದುರಿಸುವಂತಾಯಿತು. ಅವರ ಪ್ರಮುಖ ನಾಟಕಗಳು- ಮಹಾಚೈತ್ರ, ಸುಲ್ತಾನ್ ಟಿಪ್ಪು, ಮಂಟೇಸ್ವಾಮಿ, ಮಾದರಿ ಮಾದಯ್ಯ, ಮದುವೆ ಹೆಣ್ಣು. ಶಿವಪ್ರಕಾಶರ ಕವನ ಸಂಕಲನಗಳು- ಮಳೆ ಬಿದ್ದ ...
READ MORE