‘ಮೊದಲ ಸಹಸ್ರಮಾನದ ಕನ್ನಡ ಶಾಸನಗಳು ಸಂಪುಟ-6’ ಕೃತಿಯು ಷ. ಶೆಟ್ಟರ್ ಅವರ 2020- ಹಳಗನ್ನಡ ಶಾಸನಗಳ ಸಮಗ್ರ ಅಧ್ಯಯನ ಸಾ.ಶ.ಸು `995-1000’ ಕೃತಿಯಾಗಿದೆ. ಪಠ್ಯದಲ್ಲಿ ಬಳಕೆಯಾಗಿರುವ ಪ್ರತಿ ಹಳಗನ್ನಡ ಪದಕ್ಕೆ ಆಧುನಿಕ ಕನ್ನಡದಲ್ಲಿ ಅರ್ಥವನ್ನು ಒದಗಿಸಲಾಗಿದೆ. ಅದರ ವಿಶೇಷತೆಯನ್ನು ತಿಳಿಸಲು ಒಮ್ಮೊಮ್ಮೆ ಇನ್ನೂ ಹೆಚ್ಚಿನ ವಿವರಗಳನ್ನೂ ಕೊಡಲಾಗಿದೆ. ಮೊದಲ ಸಹಸ್ರಮಾನದಲ್ಲಿ ಬರೆಸಿದ ಹಳಗನ್ನಡ ಶಾಸನಗಳ ಸಂಖ್ಯಾ ಪ್ರಮಾಣವನ್ನಿನ್ನೂ ಇತ್ಯರ್ಥಗೊಳಿಸಬೇಕಾಗಿದೆ. ಆದರೆ, ಇವುಗಳಲ್ಲಿ ಹೆಚ್ಚಿನವು ಕನ್ನಡಲಿಪಿ ಮತ್ತು ಭಾಷೆಯಲ್ಲಿದ್ದವೆಂಬುದರ ಬಗ್ಗೆ ಸಂಶಯವಿಲ್ಲ, ಬಾಹ್ಮೀಲಿಪಿ ಮತ್ತು ಪ್ರಾಕೃತ ನುಡಿಗಟ್ಟುಗಳು ಮಾತ್ರ ಶಾಸನ ಮಾಧ್ಯಮಗಳಾಗಿದ್ದ ಕ್ರಿ.ಪೂ. ಮೂರನೆಯ ಶತಮಾನದಿಂದ ಕ್ರಿ.ಶ. ಮೂರನೆಯ ಶತಮಾನದ ಕಾಲಾವಧಿಯಲ್ಲಿ ಇಲ್ಲಿ ಬರೆಸಿದ ಸುಮಾರು 400 ಶಿಲಾಶಾಸನಗಳು ಈಗ ಉಳಿದುಕೊಂಡಿವೆ. ನಾಲ್ಕನೆಯ ಶತಮಾನದಿಂದ ಹತ್ತನೆಯ ಶತಮಾನದ ಕೊನೆಯವರೆಗೆ ಸಂಸ್ಕೃತ ಭಾಷೆ ಮತ್ತು ಹಳಗನ್ನಡ ಲಿಪಿಯಲ್ಲಿ (ಇಲ್ಲವೇ ಕನ್ನಡ ಮತ್ತು ಸಂಸ್ಕೃತ ದ್ವಿಭಾಷೆಗಳಲ್ಲಿ) ಬರೆಸಿದ ತಾಮ್ರಪಟ ಮತ್ತು ಶಿಲಾ ಶಾಸನಗಳಲ್ಲಿ ಸುಮಾರು 500 ಉಳಿದುಕೊಂಡಿವೆ. ಸರಿಸುಮಾರು ಇದೇ ಕಾಲಾವಧಿಯಲ್ಲಿ ಹಳಗನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಸಿದ 2000 ಹೆಚ್ಚು ಸಂಖ್ಯೆಯ ಶಿಲಾಶಾಸನಗಳೂ ತಾಮ್ರಪಟಗಳೂ ಈವರೆಗೂ ಲಭ್ಯವಾಗಿವೆ. 2000 .ಹಳಗನ್ನಡ ಶಾಸನಗಳನ್ನು ಸಂಪಾದಿಸಿ, ಮತ್ತೊಮ್ಮೆ ಪ್ರಕಟಿಸುವುದು, ಈ ಅಧ್ಯಯನದ ಉದ್ದೇಶವಾಗಿದೆ.
ಷ.ಶೆಟ್ಟರ್ ಅವರು ಹುಟ್ಟಿದ್ದು 11 ಡಿಸೆಂಬರ್ 1935 ರಂದು. ಊರು ಬಳ್ಳಾರಿ ಜಿಲ್ಲೆಯ ಹಂಪಸಾಗರ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ಗಳಲ್ಲಿ ಉನ್ನತ ವ್ಯಾಸಂಗ, ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ವಿವಿಧ ವಿಶ್ವವಿದ್ಯಾಲಯದಲ್ಲಿ ಬೋಧನೆ. 1960 -96, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978-95, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ-1996-99, ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ.ಎಸ್.ರಾಧಾಕೃಷ್ಣನ್ ಪ್ರಾಧ್ಯಾಪಕತ್ವ 2002-2010, ...
READ MORE