‘ಮೊದಲ ನೋಟ’ ಕನ್ನಡದ ಖ್ಯಾತ ಲೇಖಕ ತ.ರಾ. ಸುಬ್ಬರಾವ್ ಅವರ ಕಾದಂಬರಿ ಈ ಕೃತಿ. ಕರ್ನಾಟಕ ಸರ್ಕಾರ ಪ್ರಕಟಿಸಿರುವ ಈ ಕೃತಿಗೆ ಆಗಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರು ಬರೆದಿರುವ ಮುನ್ನುಡಿ ಇದೆ. ಕೃತಿಯ ಕುರಿತು ಸಂಕಲ್ಪ ಸಿದ್ಧಿ ಎಂಬ ಭಾಗದಲ್ಲಿ ಬರೆದಿರುವ ಆರ್. ಗುಂಡೂರಾವ್ ‘ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚು ದೀರ್ಘವಾದ ಐತಿಹಾಸಿಕ ಪರಂಪರೆ ಕನ್ನಡ ನಾಡಿನದು, ಈ ಅವಧಿಯಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗಳು ಸಮೃದ್ಧವಾಗಿ, ಶ್ರೀಮಂತವಾಗಿ ಬೆಳೆದು ಈ ನಾಡಿನ ಇತಿಹಾಸವನ್ನು ಭವ್ಯವಾಗಿಸಿವೆ ಒಂದು ನಾಡಿನ ಅಂತಃಸತ್ವ ಅಡಕವಾಗಿರುವುದೇ ಅದರ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ. ಈ ನೆಲೆಗಟ್ಟು ಭದ್ರವಾಗಿರಬೇಕಾದರೆ, ಸಾಂಸ್ಕೃತಿಕ ಪರಂಪರೆ ಉತ್ಕರ್ಷಕ್ಕೆ ಏರಲು ಔನ್ನತ್ಯ ಸಾಧಿಸಲು ನಿರಂತರವಾಗಿ ಪ್ರಯತ್ನಗಳು ನಡೆಯಬೇಕು ಎಂದಿದ್ದಾರೆ. ಕನ್ನಡ ಕಾದಂಬರಿ ಲೋಕಕ್ಕೆ ಮಹತ್ವದ ಕೊಡುಗೆ ನೀಡಿರುವ ತ.ರಾ.ಸು ಅವರಿಂದ ‘ಮೊದಲ ನೋಟ’ ಸಾಮಾಜಿಕ ಕಾದಂಬರಿ ರಚಿತವಾಗಿದೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...
READ MORE