ರಂಗಸಾಧಕ ಮೋಹನ್ ಮಾರ್ನಾಡರ ರಂಗಜೀವನ ಕುರಿತು ವಿವರಿಸುವ ಕೃತಿ ’ಮೋಹನ ತರಂಗ’. ಮುಂಬೈನಲ್ಲಿ ನೆಲೆಸಿ ಕನ್ನಡ ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದಾರೆ- ಕಲಾವಿದ ಮೋಹನ್ ಮಾರ್ನಾಡ್. ಬದುಕಿನಲ್ಲಿ ಎದುರಿಸಿದ ಏಳುಬೀಳು, ರಂಗಭೂಮಿಯಲ್ಲಿ ಅವರ ಸಾಧನೆ, ವ್ಯಾಪಕ ರಂಗಯಾನ ಇವೆಲ್ಲವನ್ನು ಆಪ್ತವಾಗುವಂತೆ ಲೇಖಕಿ ಅನಿತಾ ಪಿ. ತಾಕೊಡೆ ಈ ಕೃತಿಯಲ್ಲಿ ವಿವರಿಸಿದ್ದಾರೆ.
ಅನಿತಾ ಪಿ. ತಾಕೊಡೆ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ ಸಮೀಪದ ತಾಕೊಡೆಯವರು. ಪ್ರಸ್ತುತ ಮುಂಬಯಿ ನಿವಾಸಿ. ಇವರು ಕವಿಯಾಗಿ, ಕಥೆಗಾರರಾಗಿ, ಅಂಕಣಕಾರರಾಗಿ ಹೆಸರು ಮಾಡಿದ್ದಾರೆ. ಮುಂಬಯಿ ವಿಶ್ವವಿದ್ಯಾಲಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ರ್ಯಾಂಕ್‍ನೊಂದಿಗೆ ಪಡೆಯುವುದರ ಮೂಲಕ ಎಂ.ಬಿ.ಕುಕ್ಯಾನ್ ಬಂಗಾರದ ಪದಕದ ಅರ್ಹತೆಯನ್ನು ಸಾಧಿಸಿದ್ದಾರೆ. ಇವರು 2019ರಲ್ಲಿ ಮೈಸೂರು ಅರಮನೆಯ ವಿಶ್ವವಿಖ್ಯಾತ ದಸರಾ ಕವಿಗೋಷ್ಠಿಯಲ್ಲೂ ಭಾಗವಹಿಸಿದ್ದಾರೆ. ಇವರ ಎಂಟು ಕೃತಿಗಳು ಲೋಕಾರ್ಪಣೆಗೊಂಡಿವೆ. ಪಿಎಚ್.ಡಿ ಕೋರ್ಸ್‍ವರ್ಕ್‍ನ ಸಲುವಾಗಿ ಜಯ ಸಿ. ಸುವರ್ಣರ ಕುರಿತು ಸಿದ್ಧಪಡಿಸಿದ ‘ಸುವರ್ಣಯುಗ’ ಶೋಧ ಪ್ರಬಂಧಕ್ಕೆ ಮುಂಬಯಿ ವಿಶ್ವವಿದ್ಯಾಲಯದ ವತಿಯಿದ ಸಂಶೋಧಕಿ ಡಾ.ಲೀಲಾ ಬಿ. ಅವರು ಕೊಡಮಾಡುವ ...
READ MORE