ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಮದರ್ ಥೆರೇಸಾ ಕುರಿತು ಬರೆದ ಜೀವನ ಚರಿತ್ರೆಯ ಕೃತಿ. ಕರುಣಾಮಯಿ ತಾಯಿ ಮದರ್ ಥೆರೇಸಾ, ಹುಟ್ಟು, ಅಭ್ಯಾಸ, ಜೀವನ ಪಯಣ, ಸೇವಾ ಕೈಂಕರ್ಯ, ನಿರ್ಮಲ ಹೃದಯ, ಕುಷ್ಟರೋಗಿಗಳ ಶುಶ್ರೂಷಾಲಯ, ಶಿಶು ಭವನ, ವೃದ್ಧಾಶ್ರಮ, ಶಿಶುಪಾಲನಾ ಕೇಂದ್ರ ಹೀಗೆ ಹತ್ತು ಹಲವು ಸಂಸ್ಥೆಗಳನ್ನು ಸ್ಥಾಪಿಸಿದ ಅವರ ವ್ಯಕ್ತಿತ್ವದ ಹಿರಿಮೆ, ಅವರ ಬಾಳಸಂಜೆಯ ದಿನಗಳು...ಹೀಗೆ ವಿವಿಧ ಶೀರ್ಷಿಕೆಗಳಡಿ ಮದರ್ ಥೆರೇಸಾ ಅವರ ಕರುಣಾಮಯಿ ಜೀವನವನ್ನು ಚಿತ್ರಿಸಿದ್ದಾರೆ.
ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...
READ MORE