ಲೇಖಕ ನಾ. ದಿವಾಕರ ಅವರ ಕೃತಿ ʻಮತಾಂತರ- ವ್ಯಕ್ತಿ ಸ್ವಾತಂತ್ರ್ಯದ ಆದಿಮ ಹಾದಿʼ. ಪುಸ್ತಕದಲ್ಲಿ ಮತಾಂತರ ನಿಷೇಧ ಕಾಯ್ದೆಗಳ ಮೂಲ ಉದ್ದೇಶ, ರಾಜಕೀಯ ಸ್ವರೂಪ, ತಾತ್ವಿಕ ನೆಲೆಗಟ್ಟು, ಸಂವಿಧಾನದ ಪ್ರಸ್ತುತತೆ ಹೀಗೆ ಎಲ್ಲಾ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಇಲ್ಲಿ ಹದಿನೆಂಟು ಪುಟ್ಟ ಅಧ್ಯಾಯಗಳಿವೆ.
ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...
READ MORE