ಮುಡಿ ಕಥಾ ಸಂಕಲನದಲ್ಲಿ ಹದಿನೈದು ಕಥೆಗಳಿವೆ. ವರ್ತಮಾನಗಳನ್ನು ಆಧರಿಸಿ ಕಥೆ ಪ್ರಾರಂಭಿಸುತ್ತಾ, ಬದುಕಿನ ಮೂಲಭೂತ ನಂಬಿಕೆಗಳ ನೆಲೆಗಟ್ಟನ್ನು ಶೋಧಿಸುವತ್ತ ಸಾಗಿ, ಓದುಗನನ್ನು ಹೊಸ ಆಯಾಮವೊಂದರತ್ತ ಸೆಳೆಯುತ್ತಾರೆ. ಸರಾಗವಾಗಿ ಓದಿಸಿಕೊಂಡು ಹೋಗುವ ಈಕಥೆಗಳು ಅಂತ್ಯದಲ್ಲಿ ಹೊಸ ಕಾಣ್ಕೆಯ ಸಾಧ್ಯತೆಗಳನ್ನು ತೆರೆದಿಡುತ್ತವೆ. ಈ ಕಥಾಸಂಕಲನಕ್ಕೆ ಎಂ.ಜಿ. ರಂಗನಾಥನ್ ಸ್ಮಾರಕ ಪುಸ್ತಕ ಬಹುಮಾನವೂ ಸಂದಿದೆ.
ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ...
READ MORE