ತೇಜಸ್ವಿಯವರ ಕಾಡಿನ ಕಥೆಗಳು ಭಾಗ -4 (1994) ಕೂಡ ಕೆನೆತ್ ಅಂಡರ್‍ಸನ್ ಅನುಭವ ಸಂಗ್ರಹ ರೂಪಾಂತರದ ನಾಲ್ಕನೇ ಭಾಗ. ಈ ಸಂಕಲನದಲ್ಲಿ ಮುನಿಶಾಮಿ ಮತ್ತು ಮಾಗಡಿ ಚಿರತೆ, ಮುನಿಸ್ವಾಮಿ ಮತ್ತು ಅಲ್ಲಾಭಕ್ತಿಯ ಪುಂಡು ಕರಡಿ, ಬಾಳೆತೋಟದ ಸ್ವಾಮಿ, ರಾಂಪುರದ ಒಕ್ಕಣ್ಣ ಎಂಬ ಕಥೆಗಳಿವೆ.
ಕನ್ನಡದ ಹೆಸರಾಂತ ಲೇಖಕ ಕುವೆಂಪು ಅವರ ಪುತ್ರರಾಗಿರುವ ಪೂರ್ಣಚಂದ್ರ ತೇಜಸ್ವಿ ಅವರು 08-09-1938ರದು ಜನಿಸಿದರು. ತಮ್ಮ ಬರವಣಿಗೆಯ ಮೂಲಕವೇ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ’ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತೇಜಸ್ವಿ ಅವರು ಕನ್ನಡದಲ್ಲಿ ನವ್ಯ ಸಾಹಿತ್ಯ ಚಳುವಳಿಯು ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಿನಗಳಲ್ಲಿ ಅದಕ್ಕಿಂತ ಭಿನ್ನವಾದ ನೆಲೆಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ನವ್ಯ ಲೇಖಕರು ನಗರ ಕೇಂದ್ರಿತ, ವ್ಯಕ್ತಿನಿಷ್ಟ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಬದುಕು ಕುರಿತ ಮತ್ತು ಅದು ಹಳಹಳಿಕೆಯ ಧ್ವನಿಯಲ್ಲಿ ಇರದ ಹಾಗೆ ನೋಡಿಕೊಂಡರು. ಲೋಹಿಯಾ ಚಿಂತನೆಗಳಿಂದ ಪ್ರೇರಿತರಾಗಿದ್ದ ...
READ MORE