ವೈದ್ಯಕೀಯ ವಿದ್ಯಾರ್ಥಿಯಾಗಿರುವ ಮಗನ ಕೋಣೆಯಲ್ಲಿದ್ದ ತಲೆಬುರುಡೆಯೊಂದು ಕಾದಂಬರಿಯಲ್ಲಿ ಬರುವ ನಿರೂಪಕನ ಅವಗುಣವನ್ನು ತೆರೆದಿಡುತ್ತದೆ. ಕೊನೆಗೆ ಆತ ಅದರಿಂದ ಪಶ್ಚಾತ್ತಾಪ ಅನುಭವಿಸುತ್ತಾನೆ. ’ಕಾಣದ ಸುಂದರಿ’ ಕಾದಂಬರಿಯಲ್ಲಿ ನಡೆಯುವ ಅತೀಂದ್ರೀಯ ಆಟವನ್ನು ಇಲ್ಲಿಯೂ ಕಾಣಬಹುದು. ಶೋಷಿತಳೊಬ್ಬಳನ್ನು ಮತ್ತೆ ಮತ್ತೆ ಶೋಷಿಸುವ ಸಮಾಜವನ್ನು ಬೀchi ವಿಶಿಷ್ಟ ರೀತಿಯಲ್ಲಿ ಇಲ್ಲಿ ಚಿತ್ರಿಸಿದ್ದಾರೆ.
'ಬೀಚಿ' ಎಂಬುದು ರಾಯಸಂ ಭೀಮಸೇನರಾವ್ ಅವರ ಕಾವ್ಯನಾಮ. ಅವರು ಜನಿಸಿದ್ದು 1913ರ ಏಪ್ರಿಲ್ 23ರಂದು ಬಳ್ಳಾರಿ ಜಿಲ್ಲೆಯ ಹರಪನ ಹಳ್ಳಿಯಲ್ಲಿ. ತಂದೆ ರಾಯಸಂ ಶ್ರೀನಿವಾಸರಾವ್, ತಾಯಿ ಭಾರತಮ್ಮ. 'ಬೀಚಿ' ಯವರ ಹೆಸರಿನ ಹಾಗೆ ಅವರ ಸಹಿಯೂ ವಿಚಿತ್ರ- 'ಬಿ' ಕನ್ನಡವಾದರೆ 'ಚಿ' ಇಂಗ್ಲಿಷು. ಸತಿ ಸೂಳೆ, ಸರಸ್ವತಿ ಸಂಹಾರ, ಖಾದಿ ಸೀರೆ, ಹೆಂಣು ಕಾಣದ ಗಂಡ, ಸತ್ತವನು ಎದ್ದುಬಂದಾಗ, ಮೇಡಮ್ಮನ ಗಂಡ, ಏರದ ಬಳೆ, ಬಂಗಾರದ ಕತ್ತೆ, ಮೂರು ಹೆಂಣು ಐದು ಜಡೆ, ಸುನಂದೂಗ ಏನಂತೆ, ಲೇವಡಿ ಟೈಪಿಸ್ಟ್, ಆರಿದ ಚಹಾ, ಬಿತ್ತಿದ್ದೇ ಬೇವು, ಕಾಮಂಣ (ಕಾದಂಬರಿಗಳು). ತಿಂಮನ ತಲೆ, ಆರು ಏಳು ಸ್ತ್ರೀ ಸೌಖ್ಯ, ಅಮ್ಮಾವ್ರ ಕಾಲ್ಗುಣ, ...
READ MORE