‘ಮುಸ್ಲಿಮರ ತಲ್ಲಣಗಳು’ ಪುಸ್ತಕವನ್ನು ಕೆ. ಷರೀಫಾ ಅವರ ಸ್ವಾತಂತ್ರೋತ್ತರ ಭಾರತದ ಸ್ಥಿತಿ ಗತಿಗಳನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಭಾರತದ ಮುಸ್ಲಿಮರು ಎದುರಿಸುತ್ತಿರುವ ಸಮಸ್ಯೆ, ತಲ್ಲಣ, ಸಂಕಟ ಒಟ್ಟಿನಲ್ಲಿ ಹೇಳಬೇಕೆಂದರೆ ಭಾರತದಲ್ಲಿನ ಮುಸಲ್ಮಾನರ ಚಿಂತಾಜನಕ ಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಈ ಪುಟ್ಟ ಪುಸ್ತಕದಲ್ಲಿ ಮುಸ್ಲಿಮರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಎಂತಹ ಕಷ್ಟಕರವಾಗಿದೆ ಎಂಬುದನ್ನು ಸ್ವಲ್ಪಮಟ್ಟಿಗೆ ನನಗೆ ಹೇಳಲು ಸಾಧ್ಯವಾಗಿದೆ ಎಂದು ಕೆ. ಷರೀಫಾ ಹೇಳಿದ್ದಾರೆ. ಸ್ವಾತಂತ್ರ್ಯದ ಪೂರ್ವೇತಿಹಾಸ, ಭಾರತದ ಸ್ವಾತಂತ್ರ್ಯ ಚಳುವಳಿಗೆ ಮುಸ್ಲಿಮರ ಕೊಡುಗೆ, ಭಾರತದ ವಿಭಜನೆ, ಭುಗಿಲೆದ್ದ ಹಿಂಸಾಚಾರ, ಸ್ವಾತಂತ್ರ್ಯ ನಂತರದ ಭಾರತ , ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ, ರಾಷ್ಟ್ರದ ಆರ್ಥಿಕತೆಯ ಮೇಲೆ ದುಷ್ಪರಿಣಾಮ, ಪ್ರಭುತ್ವದ ಕೋಮುವಾದಿ ನಡೆಗಳು, ನ್ಯಾಯ ನೀಡಿಕೆಯಲ್ಲಿ ತಾರತಮ್ಯ, ಕರ್ನಾಟಕದ ಮುಸ್ಲಿಮರ ಸ್ಥಿತಿಗತಿ, ಸಮಾರೋಪ ಇನ್ನಿತರೆ ವಿಷಯಗಳ ಕುರಿತು ಸಂಕ್ಷಿಪ್ತವಾಗಿ ಈ ಪುಸ್ತಕದಲ್ಲಿ ವಿವರಿಸಿದ್ದಾರೆ.
ಲೇಖಕಿ ಕೆ.ಷರೀಫಾ ಅವರು 1957 ಮೇ 05ರಂದು ಗುಲಬರ್ಗಾದಲ್ಲಿ ಜನಿಸಿದರು. ತಂದೆ ಬಾಬುಮಿಯಾ, ತಾಯಿ ಪುತಲೀಬೇಗಂ. ಬಿಡುಗಡೆಯ ಕವಿತೆಗಳು, ನೂರೇನ್‌ಳ ಅಂತರಂಗ, ಪಾಂಚಾಲಿ, ಮುಮ್ರಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂವೇದನೆ (ವಿಮರ್ಶೆ), ಮಹಿಳಾ ಮಾರ್ಗ (ಸಹ ಸಂಪಾದನೆ), ಆಧುನಿಕ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳಾ ಸಂವೇದನೆ (ಸಂಶೋಧನೆ), ಹೊಸ ಶತಮಾನದ ಕಾವ್ಯ (ಸಂಪಾದನೆ) ಅವರ ಪ್ರಕಟಿತ ಕೃತಿಗಳು. ಅವರಿಗೆ ಮಹಿಳೆ ಮತ್ತು ಸಮಾಜ ಪ್ರಶಸ್ತಿ, ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ, ಅತ್ತಿಮಬ್ಬೆ ಸಾಹಿತ್ಯ ಶ್ರೀ ಪ್ರಶಸ್ತಿ, 2019ನೇ ಸಾಲಿನ ಕ.ಸಾ.ಪದ ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿ ದೊರೆತಿದೆ. ...
READ MORE