ಮುಟ್ಟಿನ ನೆತ್ತರಲ್ಲಿ- ಕವಿ ಎಚ್. ಲಕ್ಷ್ಮೀನಾರಾಯಣಸ್ವಾಮಿಯವರ ಎರಡನೇ ಕವನ ಸಂಕಲನವಿದು. ತಮ್ಮ ಮೊದಲ ಸಂಕಲನ ‘ಗೆಳತಿ ಮತ್ತೊಮ್ಮೆ ಯೋಚಿಸು’ ಪುಸ್ತಕದ ಮೂಲಕ ಈಗಾಗಲೇ ಕಾವ್ಯಾಸಕ್ತರ ಗಮನ ಸೆಳೆದಿದ್ದಾರೆ. ಮೊದಲ ಸಂಕಲನದ ಮುಂದುವರಿಕೆಯಂತೆ ರಚಿತವಾಗಿರುವ ಈ ಕವಿತೆಗಳು ಕವಿಯ ಬೆಳವಣಿಗೆಯನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಕನ್ನಡ ದಲಿತ ಕಾವ್ಯ ಪರಂಪರೆಗೆ ಇಲ್ಲಿನ ಅನೇಕ ಕವಿತೆಗಳು ಸ್ವಯಂ ಸೇರ್ಪಡೆಯಾಗಿ ಅದರ ಬಹುಮುಖೀದರ್ಶನವನ್ನು ಓದುಗನಿಗೆ ನೀಡುತ್ತವೆ.
ಲೇಖಕ ಎಚ್. ಲಕ್ಷ್ಮೀನಾರಾಯಣ ಸ್ವಾಮಿ ಅವರು (1987) ಬೆಂಗಳೂರಿನವರು. ಬೆಂಗಳೂರು ವಿ.ವಿ ಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಪದವೀಧರರು. ಸದ್ಯ, ಅದೇ ಕೇಂದ್ರದಲ್ಲಿ ಹಿರಿಯ ಸಂಶೋಧನಾ ವಿದ್ಯಾರ್ಥಿಯಾಗಿದ್ದಾರೆ. ಕೃತಿಗಳು: ಗೆಳತಿ ಮತ್ತೊಮ್ಮೆ ಯೋಚಿಸು, ಮುಟ್ಟಿನ ನೆತ್ತರಲ್ಲಿ’, ಉರಿವ ಕೆಂಡದ ಸೆರಗು (ಕವನ ಸಂಕಲನಗಳು), ಜಾಲಿಮರದ ಜೋಳಿಗೆಯಲ್ಲಿ ಎಂಬ ಖಂಡಕಾವ್ಯ ಕೃತಿ, ಇವರ ‘ತೊಗಲ ಚೀಲದ ಕರ್ಣ’ ಕೃತಿಗೆ 2017 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿ ಲಭಿಸಿದೆ.ತೊಗಲ ಚೀಲದ ಕರ್ಣ, ಸಾಣೆಗಲ್ಲು, ಬಹುಪರಾಕಿನ ಸಂತೆಯೊಳಗೆ (ವಿಮರ್ಶಾ ಕೃತಿ) ಡಾ. ಎಸ್ ಎನ್ ಲಕ್ಷ್ಮೀನಾರಾಯಣ ಭಟ್ಟರ ಕುರಿತ ಕಿರು ಹೊತ್ತಿಗೆ ಪ್ರಕಟಿಸಿದ್ದಾರೆ. ಬೆಂಗಳೂರು ಸಾರಿಗೆ ಸಂಸ್ಥೆ ನೀಡುವ ...
READ MORE