‘ಮುಟ್ಟು ವಿಜ್ಞಾನ ಸಂಸ್ಕೃತಿ ಮತ್ತು ಅನುಭವ’ ಲೇಖಕಿ ಎಚ್.ಎಸ್. ಅನುಪಮಾ ಅವರ ಕೃತಿ. ವೃತ್ತಿಯಲ್ಲಿ ವೈದ್ಯರಾದ ಡಾ. ಎಚ್.ಎಸ್. ಅನುಪಮಾ ಅವರು ಹೆಣ್ಣುಮಕ್ಕಳ ಸಹಜ ದೈಹಿಕ ಕ್ರಿಯೆ ಮುಟ್ಟಿನ ಬಗ್ಗೆ ಮುಕ್ತವಾಗಿ ವಿವರಿಸಿದ್ದಾರೆ. ಮುಟ್ಟೆಂದರೆ ಗುಟ್ಟು ಎಂಬಂತೆ ಬಿಂಬಿಸುವ ಆ ಬಗ್ಗೆ ಯಾರಲ್ಲೂ ಚರ್ಚಿಸಬಾರದು ಎಂಬ ಅಲಿಖಿತ ನಿಯಮ ನಮ್ಮ ಸಮಾಜದಲ್ಲಿ ಹಿಂದಿನಿಂದ ಬಂದಿದೆ. ಇದರಿಂದಾಗಿ ಅನೇಕ ಹೆಣ್ಣುಮಕ್ಕಳು ವಿಭಿನ್ನ ಸಮಸ್ಯೆಗಳಿಂದ ನರಳುವಂತಾಗಿದೆ. ತಮ್ಮ ಸಮಸ್ಯೆಯನ್ನು ಮುಕ್ತವಾಗಿ ಹೇಳಿಕೊಳ್ಳಲಾಗದ ಹೆಣ್ಣು ಮಕ್ಕಳ ಒಳ ತುಡಿತಗಳನ್ನು ವೈದ್ಯರಾದ ಅನುಪಮಾ ಈ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ವಿಜ್ಞಾನ, ಸಂಸ್ಕೃತಿ ಮತ್ತು ಅನುಭವಗಳ ಸಾಣೆಯಲ್ಲಿ ಮುಟ್ಟಿನ ಕುರಿತಾದ ಹಲವಾರು ವಿಶಿಷ್ಟ ವಿಚಾರಗಳನ್ನು ಈ ಕೃತಿಯಲ್ಲಿ ವಿವರಿಸಿದ್ದಾರೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಕಾಡುಹಕ್ಕಿಯ ಹಾಡು, ಸಹಗಮನ, ಬುದ್ಧ ಚರಿತೆ (ಖಂಡ ಕಾವ್ಯ), ನೆಗೆವ ಪಾದದ ಜಿಗಿತ, ಸಬರಮತಿ- ನೀಳ್ಗವಿತೆ ಎಂಬ ಐದು ಕವನ ಸಂಕಲನಗಳು, ಹೂವರಳಿದ್ದಕ್ಕೆ ಯಾಕೆ ಸಾಕ್ಷಿ?, ಚಿವುಟಿದಷ್ಟೂ ಚಿಗುರು, ಕೋವಿಡ್: ಡಾಕ್ಟರ್ ಡೈರಿ - ಗ್ರಾಮಭಾರತದ ಕಥೆಗಳು ಎಂಬ ಮೂರು ಕಥಾಸಂಕಲನಗಳು, ಡಾ. ಬಾಬಾಸಾಹೇಬ್ ಅಂಬೇಡ್ಕರ್ – ಕಿರು ಜೀವನ ಚರಿತ್ರೆ , ಮೋಚಕನ ಹೆಜ್ಜೆಗಳು - ಡಾ. ...
READ MORE