ಅನ್ವಯಿಕ ಅರ್ಥ ಶಾಸ್ತ್ರದ ತಳಹದಿಯಲ್ಲಿರುವ ಈ ಕೃತಿಯು ಬಂಡವಾಳಶಾಹಿ ಮತ್ತು ಸಮಾಜವಾದಿ ಎರಡೂ ಅಲ್ಲದ ಆರ್ಥಿಕ ಚಿಂತನೆಗಳನ್ನು ಇಲ್ಲಿ ನೀಡುತ್ತದೆ. ತಿರುವಳ್ವರ್ ಮತ್ತು ಗಾಂಧೀಜಿಯವರ ಆರ್ಥಿಕ ಚಿಂತನೆಗಳ ಆಧಾರದಲ್ಲಿ ವಿಸ್ತರಿಸುತ್ತಾ ಆಡಳಿತ ವಿಕೇಂದ್ರೀಕರಣದಲ್ಲಿ ನಗರದ ಗಾತ್ರವನ್ನು ಕುಗ್ಗಿಸಿ ಸಣ್ಣ ಪೇಟೆಗಳನ್ನು ಹೆಚ್ಚಿಸಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ,ಕೃಷಿಯೇತರ ಗ್ರಾಮೀಣ ಉತ್ಪಾದನೆಗಳನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಒಯ್ಯುವ ಉದ್ಯೋಗ ಸೃಷ್ಟಿಯ ಮೂಲಗಳನ್ನು ಶೋಧಿಸುತ್ತದೆ.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE