ಸರ್. ಎಂ. ವಿಶ್ವೇಶ್ವರಯ್ಯ ಅವರು ಕನ್ನಂಬಾಡಿ ನಿರ್ಮಿಸಿದರೆಂದು ಮಾತ್ರ ಗೊತ್ತಿದೆ. ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆಗೆ ರೂವಾರಿಗಳು ಎಂಬ ವಿಷಯ ಬಹಳ ಜನಕ್ಕೆ ತಿಳಿದಿಲ್ಲ. ಕರ್ನಾಟಕದಲ್ಲೇ ಅತಿ ಹಳೆಯದಾದ ವಿಶ್ವವಿದ್ಯಾಲಯವಿದು. ಮೈಸೂರು ಅರಸರನ್ನು ಮನವೊಲಿಸಿ ವಿಶ್ವವಿದ್ಯಾಲಯ ನಿರ್ಮಿಸಿದ ವಿಶ್ವೇಶ್ವರಯ್ಯ, ಭಾರತದಲ್ಲೇ ಮೈಸೂರು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಪರಿವರ್ತನೆಗೊಳ್ಳಬೇಕು ಮತ್ತು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ಉದಾತ್ತ ಉದ್ದೇಶ ಹೊಂದಿದ್ದರು. ಈ ಕುರಿತ ಸಂಗತಿಗಳನ್ನು ಲೇಖಕ ಗಜಾನನ ಶರ್ಮ ಅವರು ಕೃತಿಯಲ್ಲಿ ವಿವರಿಸಿದ್ದಾರೆ.
ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ. 'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ...
READ MORE