ಗೀತಾ ಹರಿಹರನ್ ಅವರ ಇಂಗ್ಲಿಷ್ ಕಾದಂಬರಿ I Have Become The Tide ಕಾದಂಬರಿಯ ಕನ್ನಡಾನುವಾದ. ಕನ್ನಡಕ್ಕೆ ಲೇಖಕಿ ಎನ್ ಗಾಯತ್ರಿ ಅನುವಾದಿಸಿದ್ದಾರೆ. ಇದೊಂದು ಶಕ್ತಿಯುತ ಬರವಣಿಗೆಯಾಗಿದ್ದು, ಬಲು ಸುಂದರ ಕಲ್ಪನೆಯೊಂದು ಈ ಕೃತಿಯಲ್ಲಿ ಬಿಚ್ಚಿಕೊಳ್ಳುತ್ತದೆ. 12ನೇ ಶತಮಾನದ ಸಂತನ ಕಥೆಯ ಹಿನ್ನೆಲೆಯಲ್ಲಿ ವರ್ತಮಾನದ ಕಥನಕ್ಕೆ ಕನ್ನಡಿಯಾಗುವ ಹರಿವು ಈ ಕಾದಂಬರಿಯಲ್ಲಿದೆ.
ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. 1957 ರ ಜನೆವರಿ 17 ರಂದು ಜನನ. ಸಾಹಿತ್ಯದಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವೀಧರರು. ರಿಸರ್ವ್ ಬ್ಯಾಂಕಿನಲ್ಲಿ ಅಧಿಕಾರಿ.ಮಹಿಳಾ ಪರ ಚಿಂತಕಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು ಮಹಿಳಾ ಹೋರಾಟಗಳಿಗೆ ಸೈದ್ಧಾಂತಿಕ ನೆಲೆ ಕಲ್ಪಿಸಿಕೊಟ್ಟವರು. ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ...
READ MORE